ಬೆಂಗಳೂರು: ರಾಜ್ಯದ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22ರವರೆಗೆ 9 ದಿನಗಳ ಕಾಲ ನಡೆಯಲಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ.
ಆಗಸ್ಟ್ 11 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಜಂಟಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಕರ್ನಾಟಕ ರೋಹಿತ್ ವೇಮುಲಾ ಮಸೂದೆ, ಕರ್ನಾಟಕ ತಪ್ಪು ಮಾಹಿತಿ, ಸುಳ್ಳು ಸುದ್ದಿ ನಿಷೇಧ ಮಸೂದೆ, ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ತಡೆ ಮಸೂದೆ ಸೇರಿದಂತೆ ಹಲವು ಮಸೂದೆಗಳು ಅಧಿವೇಶನದಲ್ಲಿ ಮಂಡನೆಯಾಗುವ ನಿರೀಕ್ಷೆಯಿದೆ.
ಆರ್ ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ, ಸರ್ಕಾರದ ಹೊಸ ಜಾತಿ ಗಣತಿ ನಿರ್ಧಾರ, ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ನಡೆಸಿದ ಸಮೀಕ್ಷೆಯಲ್ಲಿನ ಗೊಂದಲಗಳು ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ರಣತಂತ್ರ ರೂಪಿಸುತ್ತಿವೆ.


ನಿಮ್ಮ ಕಾಮೆಂಟ್ ಬರೆಯಿರಿ