ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಶುಕ್ರವಾರ ರಾತ್ರಿ ಅವರ ಲಿವ್-ಇನ್ ಪಾರ್ಟ್ನರ್ ಸಿಆರ್‌ಪಿಎಫ್ ಕಾನ್‌ಸ್ಟೆಬಲ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶನಿವಾರ ಬೆಳಿಗ್ಗೆ ಆ ವ್ಯಕ್ತಿ ಕೊಲೆಯಾದ ಮಹಿಳಾ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲಾಗಿದ್ದ ಪೊಲೀಸ್ ಠಾಣೆಗೆ ನಡೆದು ಬಂದು ಶರಣಾದ ನಂತರ ಈ ವಿಷಯ ಬೆಳಕಿಗೆ ಬಂದಿದೆ.
ಕೊಲೆಯಾದ ಅರುಣಾಬೆನ್ ನಟುಭಾಯಿ ಜಾದವ್ ಎಂಬ ಮಹಿಳೆ ಕಚ್‌ನ ಅಂಜರ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಆಗಿ ಸೇವೆ ಸಲ್ಲಿಸುತ್ತಿದ್ದರು. ಆರೋಪಿ ಸಿಆರ್‌ಪಿಎಫ್ ಕಾನ್‌ಸ್ಟೆಬಲ್ ದಿಲೀಪ್ ಡಾಂಗ್ಚಿಯಾ ಎಂಬಾತ ಕೊಲೆಯಾದ ಅರುಣಾಬೆನ್ ಅವರನ್ನು ನಿಯೋಜಿಸಲಾಗಿದ್ದ ಅಂಜರ್ ಪೊಲೀಸ್ ಠಾಣೆಗೆ ಶನಿವಾರ ಬೆಳಿಗ್ಗೆ ಹೋಗಿ ಅಪರಾಧ ಒಪ್ಪಿಕೊಂಡಿದ್ದಾನೆ.
ಶುಕ್ರವಾರ ರಾತ್ರಿ, 25 ವರ್ಷದ ಅರುಣಾಬೆನ್ ಮತ್ತು ಅವರ ಸಂಗಾತಿ ಅಂಜರ್‌ನಲ್ಲಿರುವ ತಮ್ಮ ಮನೆಯಲ್ಲಿ ಜಗಳವಾಡಿದರು, ಈ ಸಂದರ್ಭದಲ್ಲಿ ಅರುಣಾ ಆತನ ತಾಯಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಸಿಆರ್‌ಪಿಎಫ್ ಕಾನ್‌ಸ್ಟೆಬಲ್ ಕೋಪಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
“ವಾಗ್ವಾದ ಎಷ್ಟು ಉಲ್ಬಣಗೊಂಡು ದಿಲೀಪ್ ಕೋಪದಿಂದ ಅರುಣಾಬೆನ್‌ರನ್ನು ಕತ್ತು ಹಿಸುಕಿದರು” ಎಂದು ಅಂಜರ್ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್‌ಪಿ) ಮುಖೇಶ ಚೌಧರಿ ಹೇಳಿದ್ದಾರೆ.
ಮಣಿಪುರದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಲ್ಲಿ ನಿಯೋಜನೆಗೊಂಡಿರುವ ಆರೋಪಿಯು ಅರುಣಾ ಜೊತೆ ದೀರ್ಘಕಾಲದ ಸಂಬಂಧವನ್ನು ಹೊಂದಿದ್ದನು. ಇಬ್ಬರೂ ಮದುವೆಯಾಗಲು ಯೋಜಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. “ಅವರು 2021 ರಿಂದ ಇನ್‌ಸ್ಟಾಗ್ರಾಮ್ ಮೂಲಕ ಪರಸ್ಪರ ಸಂಪರ್ಕದಲ್ಲಿದ್ದರು ಮತ್ತು ಅಂದಿನಿಂದ ಒಟ್ಟಿಗೆ ವಾಸಿಸುತ್ತಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ