ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿ (ಜುಲೈ 22) ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಅಲ್ಲದೆ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೋಮವಾರ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ನೀಡಿದೆ.
ಅಲ್ಲದೆ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ವಿಜಯನಗರದ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೂ ಬೀದರ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.


ನಿಮ್ಮ ಕಾಮೆಂಟ್ ಬರೆಯಿರಿ