ಬೆಳಗಾವಿ : ವಿವಾಹ ವಿಚ್ಛೇದನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ನ್ಯಾಯಾಲಯ ಸಂಕಿರ್ಣದಲ್ಲಿ ಮಂಗಳವಾರ ಸಂಭವಿಸಿದೆ.
ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಎಂಬಾತ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ನ್ಯಾಯಾಲಯದ ಪ್ರಕ್ರಿಯೆ ನಡೆದ ನಂತರ ಹೊರಗೆ ತೆರಳುತ್ತಿದ್ದ ಪತ್ನಿಯ ಹಿಂದಿನಿಂದ ಮುತ್ತಪ್ಪ ಮಚ್ಚಿನಿಂದ ದಾಳಿ ಮಾಡಿದ್ದಾನೆ. ಅಲ್ಲಿಯೇ ಇದ್ದ ಅತ್ತೆಯ ಮೇಲೆಯೂ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಪತ್ನಿಯನ್ನು ಸವದತ್ತಿ ಸರಕಾರಿ ಆಸ್ಪತ್ರೆಗೆ ಒಯ್ದು ಪ್ತಾಥಮಿಕ ಚಿಕಿತ್ಸೆ ಪಡೆದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಮುತ್ತಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ