ವಿಪರೀತ ಮಳೆ ಮುನ್ಸೂಚನೆ ; ಇಂದು (ಜುಲೈ 24) ಉಡುಪಿ ಜಿಲ್ಲೆ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮತ್ತು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಜುಲೈ 24ರಂದು ಬುಧವಾರ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪಿಯು ಕಾಲೇಜುಗಳು ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಳೆದ ಎರಡು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜುಲೈ 24ರಂದು ರಜೆ ಘೋಷಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮುಂದಿನ ಕೆಲವು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಎರಡ್ಮೂರು ದಿನ ರೆಡ್ ಅಲರ್ಟ್ ಘೋಷಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬಿಪಿಎಲ್‌ ಕಾರ್ಡ್ ಆದಾಯದ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ ; ಸಚಿವ ಮುನಿಯಪ್ಪ

ನಿಮ್ಮ ಕಾಮೆಂಟ್ ಬರೆಯಿರಿ

advertisement