ಬೆಂಗಳೂರು | ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಬೆಂಗಳೂರು: ನಗರದ ಹಲಸೂರು ಕೆರೆ ಬಳಿ ಹತ್ಯೆಯಾದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮೀ ನೀಡಿದ ದೂರಿನ ಮೇರೆಗೆ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದ ಭಾರತೀನಗರ ಪೊಲೀಸರು ಈವರೆಗೆ 14 ಮಂದಿ ಆರೋಪಿಗಳನ್ನು ಬಂಧಿಸಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಜುಲೈ 15ರಂದು ರೌಡಿಶೀಟರ್ ಬಿಕ್ಲು ಶಿವನ ಮನೆಯ ಬಳಿ ನಿಂತಿದ್ದಾಗ ಮಾರಕಾಸ್ತ್ರಗಳಿಂದ ಈತನನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖಾಧಿಕಾರಿ ಕೆ.ಜಿ. ಹಳ್ಳಿ ಉಪವಿಭಾಗದ ಎಸಿಪಿ ಪ್ರಕಾಶ ರಾಥೋಡ ಅವರು ಪ್ರಕರಣದ ಐದನೇ ಆರೋಪಿಯಾಗಿರುವ ಬೈರತಿ ಬಸವರಾಜ್ ಅವರನ್ನು ಎರಡು ಬಾರಿ ವಿಚಾರಣೆಗೆ ಕರೆಯಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಜಗದೀಶ ನಾಪತ್ತೆಯಾಗಿದ್ದು, ಈತನಿಗಾಗಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ. ಈಗ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement