ಬೆಂಗಳೂರು ಕಾಲ್ತುಳಿತದ ಪ್ರಕರಣ: ಆರ್​ಸಿಬಿ, ಡಿಎನ್​ಎ ವಿರುದ್ಧ ಕ್ರಿಮಿನಲ್‌ ಪ್ರಕರಣ, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ

ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿ, ಅನೇಕರು ಗಾಯಗೊಂಡ ಘಟನೆಯ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ನೇತೃತ್ವದ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮತ್ತು ಡಿಎನ್‌ಎ (DNA) ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್‌ ಸಂಸ್ಥೆಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಹಾಗೂ ಪೊಲೀಸರ ವಿರುದ್ಧ ಇಲಾಖಾ ತನಿಖೆ ನಡೆಸಲು ಸಂಪುಟ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ಈ ವಿಷಯ ತಿಳಿಸಿದ್ದಾರೆ.

ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಅವರ ವರದಿಯನ್ನು ಅಂಗೀಕರಿಸಲಾಗಿದ್ದು, ಕಾಲ್ತುಳಿತ ಮತ್ತು ನಿರ್ಲಕ್ಷ್ಯಕ್ಕೆ ಯಾರು ಕಾರಣರೆಂದು ನ್ಯಾಯಮೂರ್ತಿ ಡಿ’ಕುನ್ಹಾ ವರದಿಯಲ್ಲಿ ಸೂಚಿಸಲಾಗಿದೆ. ಅದರ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ ಎಂದು ಎಚ್‌ಕೆ.ಪಾಟೀಲ ಪಾಟೀಲ ಹೇಳಿದರು.
ದುರಂತ ನಡೆದ ಒಂದು ದಿನದ ನಂತರ, ಜೂನ್ 5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಂಗ ತನಿಖೆಗೆ ಆದೇಶಿಸಿದರು. ಕಾಲ್ತುಳಿತದ ನಂತರ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಮತ್ತು ಹೆಚ್ಚುವರಿ ಆಯುಕ್ತ (ಪಶ್ಚಿಮ) ವಿಕಾಸಕುಮಾರ ವಿಕಾಸ ಸೇರಿದಂತೆ ಕೆಲ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು.
ಐಪಿಎಲ್‌ನಲ್ಲಿ ಆರ್‌ಸಿಬಿ ಚೊಚ್ಚಲ ಕಪ್ ಗೆದ್ದ ನಂತರ ಫ್ರಾಂಚೈಸಿ ಆಯೋಜಿಸಿದ್ದ ವಿಜಯೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ಈ ಕಾಲ್ತುಳಿತ ಸಂಭವಿಸಿತ್ತು. ಕ್ರೀಡಾಂಗಣದ ಹೊರಗೆ ಭಾರಿ ಜನಸಮೂಹ ಜಮಾಯಿಸಿದ್ದರಿಂದ ನೂಕು-ನುಗ್ಗಲು ಸಂಭವಿಸಿ ಕಾಲ್ತುಳಿತ ಸಂಭವಿಸಿತ್ತು.

ಪ್ರಮುಖ ಸುದ್ದಿ :-   ಕುಮಟಾ : ಶಾಲೆಯ ಪಕ್ಕವೇ ಭೂ ಕುಸಿತ ; ಕಟ್ಟಡಕ್ಕೆ ಬಂದು ಅಪ್ಪಳಿಸಿದ ಬೃಹತ್‌ ಬಂಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement