ವಿಪರೀತ ಮಳೆ ಮುನ್ನೆಚ್ಚರಿಕೆ : ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

ಮಂಗಳೂರು/ಮಡಿಕೇರಿ : ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಗಳ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ, ಜುಲೈ 25 ರಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಜುಲೈ 25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ, ಫ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಯಲ್ಲಿ ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಣೆ ಮಾಡಲಾಗಿದೆ. ನದಿ ತೀರ,‌ತಗ್ಗು ಪ್ರದೇಶ, ಬೆಟ್ಟ ಗುಡ್ಡಗಳ ‌ನಿವಾಸಿಗಳು ಎಚ್ಚರಿಕೆಯಿಂದ ಇರಬೇಕೆಂದು ಮನವಿ ಮಾಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement