ವಿಪರೀತ ಮಳೆ ಮುನ್ಸೂಚನೆ ; ಉತ್ತರ ಕನ್ನಡ ಜಿಲ್ಲೆ 5 ತಾಲೂಕುಗಳ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 26ರಂದು ರಜೆ ಘೋಷಣೆ

ಕಾರವಾರ : ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ, ವಿಶೇಷವಾಗಿ ಕರಾವಳಿ ತಾಲೂಕುಗಳಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ್ದು, ‘ರೆಡ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡಜಿಲ್ಲೆಯ ಐದು ತಾಲೂಕುಗಳ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ, ಶನಿವಾರ ಜುಲೈ 26ರಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲ ಅಂಗನವಾಡಗೂ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜು ಹಾಗೂ ಕಾಲೇಜು (ಪರೀಕ್ಷೆ ಹೊರತುಪಡಿಸಿ)ಗಳಿಗೆ ಜುಲೈ 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಉತ್ತರ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮಕ್ಕಳು ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೋಷಕರು ಮಕ್ಕಳನ್ನು ಅನಗತ್ಯವಾಗಿ ಹೊರಗೆ ಕಳುಹಿಸದಂತೆ ಮತ್ತು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement