ಹೊನ್ನಾವರ : ರಭಸದ ಮಳೆಗೆ ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿ

ಹೊನ್ನಾವರ: ಭಾರಿ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅನಂತವಾಡಿ ಸಮೀಪ ಸಂಭವಿಸಿದೆ ಎಂದು ವರದಿಯಾಗಿದೆ.
ಅನಂತವಾಡಿ, ಖಾಸಗೇರಿ ನಿವಾಸಿ ಜನಾರ್ದನ ರಾಮ ಮರಾಠಿ (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೃಷಿ ಕಾರ್ಮಿಕರಾಗಿದ್ದ ಜನಾರ್ದನ ಅವರು ಶುಕ್ರವಾರ ಅನಂತವಾಡಿಯ ಮರಾಠಿಕೇರಿ ಬಳಿಯ ತಮ್ಮ ಗದ್ದೆಯಲ್ಲಿ ಕೆಲಸಕ್ಕೆ ತೆರಳಿದ್ದರು. ಭಾರಿ ಮಳೆಯಾಗಿದ್ದರಿಂದ ಮಳೆಯಿಂದಾಗಿ ಗದ್ದೆಯಲ್ಲಿ ಕೆಲಸ ಮಾಡಲು ಸಾಧ್ಯವಾಗದೆ ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ದಾರಿಯಲ್ಲಿನ ಹಳ್ಳವನ್ನು ದಾಟುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಉತ್ತರ ಕನ್ನಡ ಹಿಲ್ಲೆಯಲ್ಲಿ ಖಲೆದ ಕೆಲ ದಿನಗಳಿಂದ ಮಳೆ ವಿಪರೀತವಾಗಿ ಸುರಿಯುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ಬಗ್ಗೆ ಮಂಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶೇರ್ ಮಾಡಿ :

  1. M V Ramanuja Iyengar

    ಸೂಕ್ತ ಪಾರದರ್ಶಕ ಕಾನೂನೂನಾತ್ಮಕ ತನಿಖೆ ನಡೆಯಲಿ

ನಿಮ್ಮ ಕಾಮೆಂಟ್ ಬರೆಯಿರಿ

advertisement