ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಕಚೇರಿ ಮತ್ತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ.
ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 11 ಗಂಟೆಗೆ ಬಾಂಬ್ ಸ್ಪೋಟ ಮತ್ತು ಡಿಕೆಶಿ ಕಚೇರಿಯಲ್ಲಿ ಬಾಂಬ್ ಸ್ಫೋಟವಾಗಲಿದೆ ಎಂದು ಇ-ಮೇಲ್ ಬಂದಿತ್ತು. ತಕ್ಷಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಬಾಂಬ್ ಪತ್ತೆ ದಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ ಪರಿಶೀಲನೆ ನಡೆಸಿದರು. ಆದರೆ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ಗೊತ್ತಾಗಿದೆ.
[email protected] ಮೇಲ್‌ನಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಟರ್ಮಿನಲ್ 1, 2ರಲ್ಲಿ ಬಾಂಬ್ ಇಟ್ಟಿದ್ದು ಎಲ್ಲರನ್ನೂ ತೆರವುಗೊಳಿಸಿ. ಏಕಕಾಲದಲ್ಲಿ ಡಿಸಿಎಂ ಕಚೇರಿ, ಏರ್‌ಪೋರ್ಟ್‌ನಲ್ಲಿ ಬ್ಲಾಸ್ಟ್ ಆಗಲಿದೆ ಎಂದು ಮೇಲ್ನಲ್ಲಿ ಬರೆಯಲಾಗಿತ್ತು. ಬಾಂಬ್ ಬೆದರಿಕೆ ಸಂದೇಶದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಶುರುಮಾಡಿದ್ದು, ಇ-ಮೇಲ್ ಕಳುಹಿಸಿದವರ ಹಿನ್ನೆಲೆಯಲ್ಲಿ ಕಲೆಹಾಕುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ