ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನ ಬಿರುಗಾಳಿ ಸಹಿತ ಭಾರಿ ಮಳೆ ; ಮುನ್ಸೂಚನೆ

ಬೆಂಗಳೂರು : ಕರ್ನಾಟಕದ 7 ಜಿಲ್ಲೆಗಳಿಗೆ ಜೂನ್‌ 28ರಿಂದ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಇರಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ ಬೀದರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಳೆಯಾಗಲಿದೆ.
ಮುಂದಿನ ಮೂರ್ನಾಲಕು ದಿನಗಳ ವರೆಗೆ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತಮಳೆ ಸುರಿಯುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಮತ್ತು ಯೆಲ್ಲೋ ಅಲರ್ಟ್’ ಘೋಷಿಸಿದೆ. ಅರಬ್ಬಿ ಸಮುದ್ರ ಮೇಲ್ಮೈನಲ್ಲಿ ಸ್ಟ್ರಫ್ ಸೃಷ್ಟಿಯಾಗಿದ್ದು, ಗಾಳಿ ಬೀಸುವಿಕೆ ಜೋರಾಗಿದೆ. ಇನ್ನು ಕೆಲವು ದಿನಗಳ ಕಾಲ ಇದೇ ರೀತಿಯ ಚಳಿ, ಗಾಳಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement