ಬೆಂಗಳೂರು : 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಮುಷ್ಕರ ನಡೆಸಲು ನಿರ್ಧರಿಸಿದೆ.
ನಾಲ್ಕು ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ ಮಾಡಿದ್ದು, ಈಗಾಗಲೇ ನಾಲ್ಕು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನೊಟೀಸ್ ನೀಡಿದ್ದಾರೆ ಎನ್ನಲಾಗಿದೆ.
ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳೆಂದರೆ, ಬಾಕಿ ವೇತನ ಬಿಡುಗಡೆ ಮತ್ತು ಹೊಸ ವೇತನದಲ್ಲಿ ಪರಿಷ್ಕರಣೆ ಮಾಡಬೇಕು ಎಂಬುದಾಗಿದೆ. ಇದನ್ನು ತಕ್ಷಣವೇ ಮಾಡುವಂತೆ ನೌಕರರು ಆಗ್ರಹಿಸಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದಾಗಿ ಎಚ್ಚರಿಸಿದ್ದಾರೆ.
2023ರಲ್ಲಿ ಶೇ. 15ರಷ್ಟು ವೇತನ ಹೆಚ್ಚಳ ಮಾಡಿದ್ದರೂ, 38 ತಿಂಗಳ ಬಾಕಿ ಪಾವತಿಸಿಲ್ಲ ಎಂದು ಹೇಳುತ್ತಿರುವ ನೌಕರರು ಸರ್ಕಾರದಿಂದ ಲಿಖಿತ ಆದೇಶಕ್ಕಾಗಿ ಒತ್ತಾಯಿಸುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ