
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಗುರುವಾರ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತಿಳಿಸಿತ್ತು. ಶನಿವಾರ ಶಿಕ್ಷೆಯ ಪ್ರಮಾಣ ಶಿಕ್ಷೆಯ ಪ್ರಮಾಣ ಪ್ರಕಟ ಆಗುತ್ತಿರುವಂತೆಯೇ ಮಾಜಿ ಪ್ರಧಾನಿ ಕಣ್ಣೀರು ಹಾಕಿದ್ದಾರೆ. ಮಧ್ಯಾಹ್ನದಿಂದ ಮಾಜಿ ಪ್ರಧಾನಿ ಟಿವಿ ನೋಡುತ್ತಲೇ ಕುಳಿತಿದ್ದರು. ಶಿಕ್ಷೆ ಪ್ರಕಟ ಆಗುತ್ತಿರುವಂತೆಯೇ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಗಳಗಳನೆ ಕಣ್ಣೀರಿಟ್ಟಿದ್ದಾರೆ ಎಂದು ವರದಿಯಾಗಿದೆ.
ಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು ಶಿಕ್ಷೆಯಾಗಿದ್ದು, ಈವರೆಗೂ ಅವರು ಅನುಭವಿಸಿರುವ ಜೈಲು ಶಿಕ್ಷೆ ಇದರಲ್ಲಿ ಮೈನಸ್ ಆಗುವುದಿಲ್ಲ. ಆದ್ದರಿಂದ ಶನಿವಾರದಿಂದಲೇ ಅವರ ಶಿಕ್ಷೆ ಪ್ರಾರಂಭವಾಗಲಿದೆ. ಈ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣನನ್ನು ಪೊಲೀಸರು ಬಂಧಿಸಿರಲಿಲ್ಲ. ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದು ತನಿಖೆ ಮಾಡಲಾಗಿತ್ತು. ಹೀಗಾಗಿ ಅವರಿಗೆ ಶಿಕ್ಷೆ ಪ್ರಕಟವಾದ ದಿನದಿಂದ ಪ್ರಾರಂಭವಾಗಲಿದೆ.



ನಿಮ್ಮ ಕಾಮೆಂಟ್ ಬರೆಯಿರಿ