ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕು; ಆ.7ರ ವರೆಗೆ ಭಾರಿ ಮಳೆ ; ಕೆಲಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಆಗಸ್ಟ್ 7ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಗಸ್ಟ್‌ 5ರಿಂದ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್‌ 5ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ತುಮುಕೂರು, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಆಗಸ್ಟ್‌ 6ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಉಳಿದ ಬಹುತೇ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಆಗಸ್ಟ್‌ 7ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement