ತುಮಕೂರು : 19 ನವಿಲುಗಳ ನಿಗೂಢ ಸಾವು

ತುಮಕೂರು: 19 ನವಿಲುಗಳು ನಿಗೂಢವಾಗಿ ಸತ್ತಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿಯ ಹನುಮಂಪುರದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆಕೋಡಿಯ ಹಳ್ಳ ನವಿಲುಗಳು ಸತ್ತು ಬಿದ್ದಿರುವುದು ಕಂಡುಬಂದಿದೆ. ಅದರಲ್ಲಿ, ಐದು ಗಂಡು ಮತ್ತು 14 ಹೆಣ್ಣು ನವಿಲುಗಳಿವೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಖಚಿತಪಡಿಸಿದ್ದಾರೆ. ಗ್ರಾಮದ ಕೆರೆ ಕೋಡಿ ನೀರು ಹರಿಯುವ ಪಕ್ಕದ ಜಮೀನುಗಳಲ್ಲಿ ಈ ನವಿಲುಗಳು ಪತ್ತೆಯಾಗಿದ್ದು, ಆಗಸ್ಟ್ 1ರ ರಾತ್ರಿ ನವಿಲುಗಳು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಬೆಳಿಗ್ಗೆ ಹೊಲದ ಕೆಲಸಗಳಿಗೆ ರೈತರು ಬಂದಾಗ ಮೃತಪಟ್ಟ ನವಿಲುಗಳು ಪತ್ತೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಿಲುಗಳ ಸಾವಿಗೆ ಕಾರಣ ತಿಳಿದಿಲ್ಲ. ಸತ್ತ ನವಿಲುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ನಂತರವಷ್ಟೇ ಸಾವಿಗೆ ಕಾರಣ ತಿಳಿಯಲಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
ಅರಣ್ಯ ಇಲಾಖೆಯ ಎಸಿಎಫ್ ಮಲ್ಲಿಕಾರ್ಜುನ್ ಮತ್ತು ವಲಯ ಅರಣ್ಯ ಅಧಿಕಾರಿ ಸುರೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅವರು ಪರಿಶೀಲನೆ ನಡೆಸಿ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಈ ಘಟನೆಯಿಂದಾಗಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆ ತನಿಖೆ ನಡೆಸಿ ಸತ್ಯಾಂಶವನ್ನು ಹೊರಗೆ ತರಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ತಿಂಗಳ ಹಿಂದಷ್ಟೇ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಷಪ್ರಾಶನದಿಂದ ಹುಲಿಗಳು (Tigers Death) ಸಾವಿಗೀಡಾಗಿದ್ದವು. ಕೆಲದಿನಗಳ ಹಿಂದೆ ಬೆಂಗಳೂರಿನಲ್ಲಿ ವಿಷಾಹಾರದಿಂದ ಶ್ವಾನಗಳು (Dog) ಸಾವಿಗೀಡಾಗಿದ್ದವು. ಅಲ್ಲದೇ 20ಕ್ಕು ಹೆಚ್ಚು ಮಂಗಗಳ ಶವ ಪತ್ತೆಯಾಗಿದ್ದವು.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement