ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ; 40ಕ್ಕೂ ಹೆಚ್ಚು ಕಿಡಿಗೇಡಿಗಳ ಐಪಿ ಅಡ್ರೆಸ್ ಪತ್ತೆ ಹಚ್ಚಿದ ಪೊಲೀಸರು

ಬೆಂಗಳೂರು: ನಟಿ ರಮ್ಯಾ (Actress Ramya) ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು 40ಕ್ಕೂ ಹೆಚ್ಚು ಜನರ ಐಪಿ ಅಡ್ರೆಸ್‌ಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಈವರೆಗೆ ನಾಲ್ವರನ್ನು ಬಂಧಿಸಿದ್ದಾರೆ.
ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ. ಚಿಕ್ಕಮಂಗಳೂರು, ಚಿತ್ರದುರ್ಗ ಹಾಗೂ ಕೋಲಾರ ಭಾಗದವರೇ ಹೆಚ್ಚು ಅಶ್ಲೀಲವಾಗಿ ಮೆಸೇಜ್ ಮಾಡಿದ್ದಾರೆ. ಸಾಮಾನ್ಯವಾಗಿ ಕಮೆಂಟ್ ಮಾಡಿದವರಿಗೆ ಕರೆಸಿ ವಾರ್ನಿಂಗ್ ಕೊಡಲಾಗುತ್ತಿದೆ. ಉಳಿದ ಕೆಲವರು ಐಪಿ ಅಡ್ರೆಸ್ ಬ್ಲಾಕ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌ ಬೇಲ್‌ ವಿಚಾರವಾಗಿ ನಡೆಯುತ್ತಿರುವ ವಿಚಾರಣೆಯ ಹಿನ್ನೆಲೆಯಲ್ಲಿ ರಮ್ಯಾ ತಮ್ಮ ಅಭಿಪ್ರಾಯ ಪೋಸ್ಟ್‌ ಮಾಡಿದ್ದರು. ಅದಕ್ಕೆ ಅವರ ಫ್ಯಾನ್ಸ್‌ ರಮ್ಯಾ ವಿರುದ್ಧ ಅಶಲೀಲವಾಗಿ ಕಮೆಂಟ್‌ ಮಾಡಿದ್ದರು. ಈ ಸಂಬಂಧ ನಟಿ ರಮ್ಯಾ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಿದ್ದರು. ಈ ದೂರನ್ನು ಕೇಂದ್ರ ವಿಭಾಗದ ಸೆನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement