ಆಗಸ್ಟ್ 10ರಂದು ಬೆಳಗಾವಿ-ಬೆಂಗಳೂರು ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಬೆಂಗಳೂರನ್ನು (ಎಲೆಕ್ಟ್ರಾನಿಕ್ ಸಿಟಿ) ನಗರದ ಕೇಂದ್ರಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ (ಆ‌ರ್.ವಿ. ರಸ್ತೆ-ಬೊಮ್ಮಸಂದ್ರ) ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮೂರು ವಂದೇ ಭಾರತ ರೈಲುಗಳಿಗೂ ಹಸಿರು ನಿಶಾನೆ ತೋರಲಿದ್ದಾರೆ.
ಈ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಆ.10) ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಬೆಂಗಳೂರು-ಬೆಳಗಾವಿ ವಂದೇ ಭಾರತ ರೈಲು (Vande Bharat Express) ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ತಿಳಿಸಿದ್ದಾರೆ.

ಅಂದು ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀಮಾತಾ ವೈಷ್ಣವೊ ದೇವಿ ಕಟ್ರಾ ಮಧ್ಯೆ ಸಂಚರಿಸಲಿರುವ ನೂತನ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ವಂದೇ ಭಾರತ ರೈಲು ಬೆಳಗಾವಿಯಿಂದ ಬೆಳಿಗ್ಗೆ 5:20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1:50ಕ್ಕೆ ಆಗಮಿಸಲಿದೆ. ಹಾಗೂ ಬೆಂಗಳೂರಿನಿಂದ ವಾಪಸ್ಸು ಮಧ್ಯಾಹ್ನ 2:20ಕ್ಕೆ ಹೊರಟು ರಾತ್ರಿ 10:40ಕ್ಕೆ ಬೆಳಗಾವಿಗೆ ತಲುಪಲಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement