ಮಸೀದಿಯಲ್ಲಿ 5 ವರ್ಷದ ಬಾಲಕಿ ಅತ್ಯಾಚಾರ ಆರೋಪ; ಎರಡು ವರ್ಷಗಳ ಬಳಿಕ ಆರೋಪಿ ಬಂಧನ

ಬೆಳಗಾವಿ : ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಘಟನೆ ನಡೆದು ಸುಮಾರು ಎರಡು ವರ್ಷಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮುರುಗೋಡು ಪ್ರದೇಶದ ಮಸೀದಿಯೊಳಗೆ 5 ವರ್ಷದ ಬಾಲಕಿಯ ಮೇಲೆ 22 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಬಾಗಲಕೋಟೆ ಜಿಲ್ಲೆಯ ತುಫೈಲ್ ಅಹ್ಮದ್ ದಾದಾಫಿರ್ ಎಂದು ಗುರುತಿಸಲಾದ ಆರೋಪಿಯನ್ನು ಬಂಧಿಸಲಾಗಿದೆ. ಈ ಘಟನೆ ಅಕ್ಟೋಬರ್ 5, 2023 ರಂದು ನಡೆದಿತ್ತು, ಆದರೆ ವೀಡಿಯೊ ವೈರಲ್‌ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ನಂತರ  ಪ್ರಕರಣ ದಾಖಲಿಸಲಾಯಿತು.
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ  ತುಫೇಲ್ ಅಹ್ಮದ್ ದಾದಾಫೀರ್ ನಗರ್ಚಿ (22) ಬಂಧಿತ ಆರೋಪಿ. ಎರಡು ವರ್ಷಗಳ ಹಿಂದೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು,   ಮಸೀದಿ ಪಕ್ಕದ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಈತ ಪುಸಲಾಯಿಸಿ ಈತ ಹೀನ ಕೃತ್ಯ ಎಸಗಿರುವ ದೃಶ್ಯ  ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ತಗಡಿನ ಶೆಡ್ ನಿರ್ಮಾಣದ ಕೆಲಸ ಮಾಡುವ ಈತ ಆಗಾಗ ಮಸೀದಿಗಳಿಗೆ ಹೋಗಿ ಧರ್ಮ ಬೋಧನೆಯನ್ನು ಸಹ ಮಾಡುತ್ತಿದ್ದ ಎನ್ನಲಾಗಿದೆ. ಆದರೆ ತಾನು ಬಾಲಕಿಯ ಮೇಲೆ ಮಾಡಿರುವ ಅತ್ಯಾಚಾರದ ವಿಷಯವನ್ನು ಬಹಿರಂಗಪಡಿಸದಂತೆ ಪೋಷಕರಿಗೆ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.
ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಎಂಬವರ ಟ್ವಿಟರ್ ನಲ್ಲಿ ವೀಡಿಯೊ ವೈರಲ್ ಆಗಿದ್ದು, ವಿಷಯ ತಿಳಿಯುತ್ತಿದ್ದಂತೆ ಮುರಗೋಡ ಠಾಣೆ ಪೊಲೀಸರು ಬಾಲಕಿ ಪೋಷಕರನ್ನು ಪತ್ತೆ ಮಾಡಿ ದೂರು ದಾಖಲಿಸಿಕೊಂಡು ಮೌಲ್ವಿಯನ್ನು ಬಂಧಿಸಿ ಹಿಂಡಲಗಾ ಜೈಲಿಗಟ್ಟಿದ್ದಾರೆ.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

ಈ ಬಗ್ಗೆ  ಮಾಧ್ಯಮದವರಿಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಶಂಕರ ಗುಳೇದ , ಆರೋಪಿ ಬಾಲಕಿಯ ತಂದೆಗೆ ಬೆದರಿಕೆ ಹಾಕಿದ್ದಾನೆ. ಬಾಲಕಿಯ ತಂದೆ ಮಾತನಾಡಿದ ಆಡಿಯೋ ತುಣುಕು ಇದೆ. ಸಾಮಾಜಿಕ ಜಾಲತಾಣಗಳ ಮಾನಿಟರಿಂಗ್ ಕೋಶದವರು ಇದನ್ನೇ ಸಾಕ್ಷಿಯಾಗಿ ಇಟ್ಟುಕೊಂಡು ಕಾರ್ಯ ಪ್ರವೃತ್ತರಾದಾಗ ಅತ್ಯಾಚಾರ ವಿಷಯ ಬೆಳಕಿಗೆ ಬಂದಿದೆ ಎಂದು ಮಾಹಿತಿ ನೀಡಿದರು.

ಆರೋಪಿಯು  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಕೆಲವರು ತಾವು ತಾವೇ ರಾಜಿ ಪಂಚಾಯಿತಿ ನಡೆಸಿ ಪ್ರಕರಣ ಮುಚ್ಚಿ ಹಾಕಿದ್ದರು. ಬಾಲಕಿಯ ಪಾಲಕರು ಸಹ ಈ ಬಗ್ಗೆ ಯಾವುದೇ ದೂರು ನೀಡಿರಲಿಲ್ಲ. ಇತ್ತೀಚಿಗೆ ಬಾಲಕಿಯ ತಂದೆ ಈ ವಿಷಯವನ್ನು ಬೇರೊಬ್ಬರ ಜೊತೆ ಮೊಬೈಲ್ ನಲ್ಲಿ ಹೇಳಿಕೊಂಡಿದ್ದರು. ಇದರ ಆಡಿಯೋ ತುಣುಕು ಮತ್ತು ಸಿಸಿಟಿವಿ ತುಣುಕನ್ನು ಪುನೀತ ಕೆರೆಹಳ್ಳಿ ಎಂಬವರು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಈ ನಿಟ್ಟಿನಲ್ಲಿ ಮುರಗೋಡ ಪೊಲೀಸ್ ಠಾಣೆಯ ಅಧಿಕಾರಿಗಳ ನೇತೃತ್ವದಲ್ಲಿ ಮೂರು ತಂಡ ರಚಿಸಿ ಬುಧವಾರ ಆರೋಪಿಯನ್ನು ಬಂಧಿಸಲಾಗಿದೆ.  ತಂದೆ-ತಾಯಿ ಜೊತೆಗೆ ಜಗಳ ಮಾಡಿಕೊಂಡು ಚಿಕ್ಕಮ್ಮನ ಮನೆಗೆ ಬಂದಿದ್ದ ಆರೋಪಿ ಈ ದುಷ್ಕತ್ಯ ಎಸಗಿದ್ದ. ಜಿಲ್ಲಾ‌‌ ಮಕ್ಕಳ ರಕ್ಷಣಾ ಘಟಕ ನೀಡಿದ ದೂರಿನ ಅನ್ವಯ ಮಂಗಳವಾರ ರಾತ್ರಿ ಆರೋಪಿ ತುಫೇಲ್ ಅಹ್ಮದ್ ದಾದಾಫೀರ್‌ನನ್ನು ಬಂಧಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

 

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement