ಕರ್ನಾಟಕದ ಹಲವು ಜಿಲ್ಲೆಗಳಲ್ಲಿ3 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಆಗಸ್ಟ್‌ 9ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಆಗಸ್ಟ್‌ 7ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನದ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ಆಗಸ್ಟ್‌ 8ರಂದು ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಕರಾವಳಿ ಜಿಲ್ಲೆಗಳು, ರಾಯಚೂರು, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್ 9ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ. ಮಂಡ್ಯ, ರಾಮನಗರ, ಮೈಸೂರು, ಕೋಲಾರ, ಮಂಡ್ಯ, ಮೈಸೂರು ಮುಂತಾದ ಕಡೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಶಿರಸಿ ; ಹಾಸ್ಟೆಲ್ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement