ಧರ್ಮಸ್ಥಳ: ನಾಲ್ವರು ಯೂ ಟ್ಯೂಬರ್‌ ಗಳ ಮೇಲೆ ಹಲ್ಲೆ

ಮಂಗಳೂರು : ವೀಡಿಯೊ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಂತರ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದಾರೆ.
ಸಂದರ್ಶನ ನಡೆಸುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದಿದೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಯೂ ಟ್ಯೂಬರ್‌ಗಳಾದ ಅಜಯ, ಅಭಿಷೇಕ ಸೇರಿ ನಾಲ್ವರ ಮೇಲೆ ಹಲ್ಲೆ ನಡೆದಿದ್ದು, ಕ್ಯಾಮೆರಾಗಳಿಗೆ ಹಾನಿಯಾಗಿದೆ. ಧರ್ಮಸ್ಥಳದ ಪಾಂಗಳ ಎಂಬಲ್ಲಿ ಹಲ್ಲೆ ನಡೆದಿದ್ದು, ಯುವಕರನ್ನು ಚದುರಿಸಲು ಪೊಲೀಸರು ಹರಸಾಹಸ ನಡೆಸಿದರು. ನಂತರ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಹಲ್ಲೆಗೊಳಗಾದ ಯೂಟ್ಯೂಬರ್ ಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement