ಡಿಸಿಎಂ ಶಿವಕುಮಾರ ಓಡಿಸಿದ್ದ ಸ್ಕೂಟರ್‌ ಮೇಲಿತ್ತು 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ; ದಂಡ ಪಾವತಿಸಿದ ಮಾಲೀಕ

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆ ಲೂಪ್ ಪರಿಶೀಲನೆಯ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಚಲಾಯಿಸಿದ್ದ ದ್ವಿಚಕ್ರ ವಾಹನದ ಮೇಲಿದ್ದ 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಿಧಿಸಲಾಗಿದ್ದ 18,500 ರೂ. ದಂಡವನ್ನು ವಾಹನ ಮಾಲೀಕರು ಪಾವತಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಆಗಸ್ಟ್ 5 ರಂದು ಹೆಬ್ಬಾಳ ಫ್ಲೈಓವರ್ ಲೂಪ್ ಪರಿಶೀಲನೆ ವೇಳೆ ಡಿಕೆ ಶಿವಕುಮಾರ ದ್ವಿಚಕ್ರ ವಾಹನವನ್ನು ಚಲಾಯಿಸಿದ್ದರು. ಬೆಂಗಳೂರು ಸಂಚಾರ ಪೊಲೀಸರ ವೆಬ್‌ಸೈಟ್ ಪ್ರಕಾರ, ಆ ದ್ವಿಚಕ್ರ ವಾಹನದ ಮೇಲೆ 34 ಸಂಚಾರ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದವು. ಹೆಲ್ಮೆಟ್ ಇಲ್ಲದೆ ಸವಾರಿ ಮಾಡುವುದು, ವಃನ ಚಲಾಯಿಸುವಾಗ ಮೊಬೈಲ್ ಫೋನ್ ಬಳಸಿದ್ದು, ಮತ್ತು ಕಮುಖ ಸಂಚಾರದಲ್ಲಿ ಸಂಚರಿಸಿರುವುದು ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳಿಗಾಗಿ ವಾಹನದ ಮೇಲೆ ಪ್ರಕರಣಗಳು ದಾಖಲಾಗಿದ್ದವು.

ಸಂಚಾರ ಪೊಲೀಸರ ಪ್ರಕಾರ, ವಾಹನದ ಮಾಲೀಕರು ಆಗಸ್ಟ್ 6 ರಂದು ಆರ್‌ಟಿ ನಗರ ಸಂಚಾರ ಪೊಲೀಸ್ ಠಾಣೆಗೆ ಆಗಮಿಸಿ ದಂಡದ ಪೂರ್ಣ ಮೊತ್ತವನ್ನು ಪಾವತಿಸಿದ್ದಾರೆ.
ಆಗಸ್ಟ್ 5 ರಂದು ಶಿವಕುಮಾರ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹೆಲ್ಮೆಟ್ ಧರಿಸಿ ಸ್ಕೂಟರ್ ಸವಾರಿ ಮಾಡುತ್ತಿರುವ ವೀಡಿಯೊ ಹಂಚಿಕೊಂಡಿದ್ದರು. ಪೋಸ್ಟ್‌ನಲ್ಲಿ, ಹೆಬ್ಬಾಳ ಫ್ಲೈಓವರ್ ಲೂಪ್ ಅನ್ನು ಸಂಚಾರಕ್ಕೆ ತೆರೆಯಲಾಗುವುದು ಎಂದು ಅವರು ಘೋಷಿಸಿದರು. ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಮತ್ತು ಸುಗಮ ಮತ್ತು ವೇಗದ ಪ್ರಯಾಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ ‘ಉತ್ತಮ ಬೆಂಗಳೂರು’ ನಿರ್ಮಿಸುವ ರಾಜ್ಯ ಸರ್ಕಾರದ ಪ್ರಯತ್ನಗಳಲ್ಲಿ ಈ ಕ್ರಮವು ಸೇರಿವೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಧರ್ಮಸ್ಥಳ ಪ್ರಕರಣ; ಚಿನ್ನಯ್ಯ ನನಗೆ ಕರೆ ಮಾಡಿದ್ದ, ಆದರೆ ಎಸ್‌ಐಟಿ ಸಂಪರ್ಕಿಸಲು ಹೇಳಿದ್ದೆ- ನಟ ಪ್ರಕಾಶ್ ರಾಜ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement