ನನ್ನ ವಜಾಗೊಳಿಸಿದ್ದರ ಹಿಂದೆ ದೊಡ್ಡ ಷಡ್ಯಂತ್ರವಿದೆ…’: ಮಾಜಿ ಸಚಿವ ಕೆ.ಎನ್. ರಾಜಣ್ಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಿಂದ ವಜಾಗೊಂಡ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಕೆ.ಎನ್. ರಾಜಣ್ಣ ಅವರು, ತಮನ್ನು ಸಂಪುಟದಿಂದ ವಜಾಗೊಳಿಸಿದ್ದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಹೇಳಿದ್ದಾರೆ.
ಮತ ಕಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ಕೊಟ್ಟ ನಂತರ ಹೈಕಮಾಂಡ್‌ ಸೂಚನೆ ಮೇರೆಗೆ ಕೆ.ಎನ್. ರಾಜಣ್ಣ ತಲೆ ದಂಡವಾಗಿದ್ದು, ಸಂಪುಟದಿಂದ ಕೆ.ಎನ್. ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ತಮ್ಮ ವಜಾಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ‘ನನ್ನ ವಜಾಗೊಳಿಸಿದ್ದರ ಹಿಂದೆ ಅತೀ ದೊಡ್ಡ ಷಡ್ಯಂತ್ರ ಅಡಗಿದೆ. ಈ ಷಡ್ಯಂತ್ರದ ಹಿಂದೆ ಯಾರೆಲ್ಲಾ ಇದ್ದಾರೆ, ಏನು ಮಾಡಿದ್ದಾರೆ ಅನ್ನುವುದು ನನಗೆ ಗೊತ್ತಿದೆ. ಇದರ ಬಗ್ಗೆ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ರಾಜ್ಯಪಾಲರ ಕಚೇರಿಯಿಂದ ವಜಾಗೊಳಿಸಿರುವ ಡ್ರಾಫ್ಟ್ ಬಂದಿರುವ ಮಾಹಿತಿ ಇದೆ. ಇದು ಹೈಕಮಾಂಡ್ ನಿರ್ಧಾರವಾಗಿದ್ದು, ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
‘ನನ್ನ ಹೇಳಿಕೆ, ನನ್ನ ಬಗ್ಗೆ ರಾಹುಲ್ ಗಾಂಧಿ ಅವರಿಗೆ ತಪ್ಪು ಗ್ರಹಿಕೆಯಾಗಿದೆ. ಅದನ್ನು ನಿವಾರಿಸುವ ಪ್ರಯತ್ನ ಮಾಡುತ್ತೇನೆ. ಖುದ್ದು ದೆಹಲಿಗೆ ತೆರಳಿ ರಾಹುಲ್ ಗಾಂಧಿ ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ. ಪಕ್ಷದ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ರಾಹುಲ್ ಗಾಂಧಿ ನಮ್ಮ ನಾಯಕರು ಎಂದು ರಾಜಣ್ಣ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮೂರು ತಿಂಗಳ ಬಳಿಕ ಸಮಾಧಿ ಅಗೆದು ತಾಯಿಯ ಶವವನ್ನು ಬೈಕ್​ನಲ್ಲಿ ತಂದ ಮಕ್ಕಳು...!

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement