ವಾಯುಭಾರ ಕುಸಿತ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೆಲ ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಆಗಸ್ಟ್‌ 14ರಿಂದ ಒಂದು ವಾರದ ವರೆಗೆ ಭಾರಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಒಂದು ವಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ  ಬಹುತೇಕ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್‌ 14ರಿಂದ ಭಾರಿ ಮಳೆಯಾಗಲಿದ್ದು,  ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರಿನಲ್ಲಿಯೂ ಒಂದು ವಾರ ಭಾರೀ ಮಳೆಯಾಗಲಿದ್ದು, ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆತಯಿದೆ ಎಂದು ಹೇಳಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಕೆಲ ಜಿಲ್ಲೆಗಳಿಗೆ ಆಗಸ್ಟ್‌ 18 ಹಾಗೂ 19ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement