ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Actor Darshan) ಮತ್ತು ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ಗುರುವಾರ (ಆಗಸ್ಟ್ 14) ರದ್ದುಗೊಳಿಸಿದೆ.
ಹೈಕೋರ್ಟ್ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್ ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಪ್ರಕಟಿಸಿತ್ತು. ಜಾಮೀನು ರದ್ದುಗೊಂಡ ಬೆನ್ನಲ್ಲೇ ಪ್ರಕರಣದ ಆರೋಪಗಳಾದ ನಟ ದರ್ಶನ್ ಹಾಗೂ ಪವಿತ್ರ ಗೌಡ ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಹೊಸಕೆರೆ ಹಳ್ಳಿಯಲ್ಲಿರುವ ವಿಜಯಲಕ್ಷ್ಮೀ ಅವರ ನಿವಾಸದಿಂದ ದರ್ಶನ್ ಅವರನ್ನು ಬಂಧಿಸಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕರೆದೊಯ್ದಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಅವರ ನಿವಾಸದಲ್ಲಿ ಪವಿತ್ರ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.
2024ರ ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳಿಗೆ ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ