ಶಾಸಕ ಸತೀಶ ಸೈಲ್ ಮನೆ ಮೇಲೆ ಇಡಿ ದಾಳಿ ವೇಳೆ ಕೋಟಿಗೂ ಹೆಚ್ಚು ನಗದು, ಕೆಜಿಗಟ್ಟಲೆ ಚಿನ್ನ ಜಪ್ತಿ

ಕಾರವಾರ: ಬೇಲೇಕೇರಿ ಬಂದರಿನಿಂದ ಕಬ್ಬಿಣದ ಅದಿರು ಕಳ್ಳ ಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದ್ದ ವೇಳೆ ಅಪಾರ ನಗದು, ಚಿನ್ನ ಮತ್ತು ಬ್ಯಾಂಕ್ ಠೇವಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ತಿಳಿಸಿದೆ.
ಈ ಕುರಿತು ಎಕ್ಸ್‌ನಲ್ಲಿ ಇ.ಡಿ. ಮಾಹಿತಿ ಹಂಚಿಕೊಂಡಿದೆ. ಇ.ಡಿ..ಅಧಿಕಾರಿಗಳು ಆಗಸ್ಟ್ 13 ಮತ್ತು 14ರಂದು ಕಾರವಾರ ಶಾಸಕ ಸತೀಶ ಸೈಲ್ ಮನೆ ಮತ್ತು ಇನ್ನಿತರ ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಿದ್ದರು.

ಅಲ್ಲದೆ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇತರ ಆರೋಪಿತರ ಕಚೇರಿ ಹಾಗೂ ನಿವಾಸಗಳಲ್ಲಿ ಪರಿಶೀಲನೆ ನಡೆಸಲಾಗಿತ್ತು. ದಾಳಿಯ ವೇಳೆ, ₹1.68 ಕೋಟಿ ನಗದು ಹಾಗೂ 6.75 ಕೆಜಿ ತೂಕದ ಚಿನ್ನಾಭರಣ ಮತ್ತು ಬಂಗಾರದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ತಿಳಿಸಿದೆ. ಇದಲ್ಲದೆ, ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಸುಮಾರು ₹14.13 ಕೋಟಿ ರೂಪಾಯಿಗಳನ್ನು ತಡೆಹಿಡಿಯಲಾಗಿದೆ ಎಂದು ಇಡಿ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement