ಕರ್ನಾಟಕದಲ್ಲಿ ಮಳೆ ಹೆಚ್ಚಳ : ಇಂದು 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 4 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಜೋರಾಗಲಿದ್ದು, ಆಗಸ್ಟ್‌ 18ರಂದು ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ನೀಡಿದೆ. ಕೊಡಗು, ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ವ್ಯಾಪಕ ಮಳೆಯಾಗಲಿದೆ (Karnataka Rains). ಉಳಿದ ಜಿಲ್ಲೆಗಳಲ್ಲಿ ಸಾದಾರಣದಿಂದ ಭಾರಿ ಮೆಳಯಾಗಲಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಆಗಸ್ಟ್ 20ರವರೆಗೆ ಕರಾವಳಿ ಮತ್ತು ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗಂಟೆಗೆ ಸರಾಸರಿ 40 – 50 ಕಿ.ಮೀ ಹಾಗೂ ಗರಿಷ್ಠ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.
ಆಗಸ್ಟ್‌ 19ರಂದು ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ನೀಡಿದ್ದು, ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಅದೇ ರೀತಿ ಆಗಸ್ಟ್‌ 20ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ವ್ಯಾಪಕ ಮಳೆ ಬೀಳುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಗೋಕರ್ಣ: ಪ್ರವಾಸಕ್ಕೆ ಬಂದಿದ್ದ ಬಾಲಕನಿಗೆ ಕಚ್ಚಿದ ಹಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement