ಕಾಂಗ್ರೆಸ್‌ ಶಾಸಕ ಶಿವಗಂಗಾ ಬಸವರಾಜುಗೆ ಶೋಕಾಸ್ ನೋಟಿಸ್

ಬೆಂಗಳೂರು: ಪದೇ ಪದೇ ಮುಖ್ಯಮಂತ್ರಿ ಬದಲಾವಣೆಯ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ ಕಾರಣಕ್ಕೆ ಶಾಸಕ ಬಸವರಾಜು ಶಿವಗಂಗಾ (Basavaraj Shivaganga) ಅವರಿಗೆ ಕಾರಣ ಕೇಳಿ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ (KPCC) ನೀಡಿದೆ.
ಇವರು ಚನ್ನಗಿರಿಯ ಕಾಂಗ್ರೆಸ್ ಶಾಸಕರಾಗಿದ್ದು, ಡಿಕೆ ಶಿವಕುಮಾರ ಅವರ ಆಪ್ತಬಣದಲ್ಲಿ ಗುರುತಿಸಿಕೊಂಡಿದ್ದಾರೆ.
ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಅವರಿಗೆ ಕೆಪಿಸಿಸಿಯಿಂದ ನೋಟಿಸ್ ನೀಡಲಾಗಿದ್ದು, ಮುಖ್ಯಮಂತ್ರಿ ಬದಲಾವಣೆಯ ಕುರಿತು ಹೇಳಿಕೆ ನೀಡಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ನೋಟಿಸ್ ನೀಡುವುದಾಗಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದೆ.

ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಸಂಚಾಲಕ ನಿವೇದಿತ್ ಆಳ್ವಾ ಅವರು ನೊಟೀಸ್ ನೀಡಿದ್ದಾರೆ. ಪಕ್ಷದಲ್ಲಿ ಗೊಂದಲ ಮತ್ತು ಮುಜುಗರ ಉಂಟುಮಾಡುವ ಹೇಳಿಕೆ ನೀಡಿರುವುದು ಮಾಧ್ಯಮದಲ್ಲಿ ಪ್ರಕಟವಾಗಿದೆ. ತಮ್ಮ ಬಹಿರಂಗ ಹೇಳಿಕೆ ಪಕ್ಷಕ್ಕೆ ಮುಜುಗರ ತಂದಿದ್ದು ಇದು ಶಿಸ್ತಿನ ಉಲ್ಲಂಘನೆಯಾಗಿದೆ. ನೋಟಿಸ್ ತಲುಪಿದ 7 ದಿನದೊಳಗೆ ಉತ್ತರ ನೀಡುವಂತೆ ನೀಡುವಂತೆ ನೋಟಿಸಿನಲ್ಲಿ ಸೂಚಿಸಲಾಗಿದೆ. ಬಸವರಾಜು ಶಿವಗಂಗಾ ಚನ್ನಗಿರಿಯ ಕಾಂಗ್ರೆಸ್ ಶಾಸಕರಾಗಿದ್ದು, ಡಿಕೆ ಶಿವಕುಮಾರ್ ಅವರ ಆಪ್ತಬಣದಲ್ಲಿ ಗುರುತಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ ; ಕಾರಣ ಏನು ?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement