ಕಾರವಾರ: ಹವಾಮಾನ ಇಲಾಖೆ (IMD) ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್ 18ರಂದು ರಜೆ ಘೋಷಿಸಲಾಗಿದೆ.
ಜಿಲ್ಲೆಯ ಕಾರವಾರ, ಅಂಕೋಲಾ ಕುಮಟಾ ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ, ದಾಂಡೇಲಿ ತಾಲೂಕುಗಳಲ್ಲಿ ವಿಪರೀತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್ 18ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಮಕ್ಕಳ ಸುರಕ್ಷತಾದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ತಿಳಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ