ಧರ್ಮಸ್ಥಳದಲ್ಲಿ ಶವ ಶೋಧ ಕಾರ್ಯ ತಾತ್ಕಾಲಿಕ ಸ್ಥಗಿತ : ಗೃಹ ಸಚಿವ ಡಾ. ಪರಮೇಶ್ವರ

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಶವ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರಕಟಿಸಿದ್ದಾರೆ.
ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ದೂರುದಾರನ ಮನವಿಯಂತೆ ಧರ್ಮಸ್ಥಳದ 13 ಸ್ಥಳಗಳಲ್ಲಿ ಗುಂಡಿ ತಗೆದು ಶೋಧ ನಡೆಸಲಾಗಿದೆ. ಅವುಗಳಲ್ಲಿ ಎರಡು ಕಡೆ ಮಾನವನ ಮೂಳೆಗಳು ಸಿಕ್ಕಿವೆ. ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರ ಫಲಿತಾಂಶ ಬರುವ ವರೆಗೆ ಎಸ್ಐಟಿ ವತಿಯಿಂದ ನಡೆಸಲಾಗುತ್ತಿರುವ ತನಿಖೆ ಸ್ಥಗಿತಗೊಳಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.

ಇನ್ನೊಂದಷ್ಟು ಕಡೆ ಮಣ್ಣು ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿದೆ. ಅಸ್ಥಿಪಂಜರದ ಪರಿಶೀಲನೆ ಆಗಬೇಕು, ಸ್ಯಾಂಪಲ್‌ಗಳ ವಿಶ್ಲೇಷಣೆ ಆಗಬೇಕು. ಇನ್ನೂ ಎಫ್‌ಎಸ್‌ಎಲ್ ವರದಿ ಬಂದಿಲ್ಲ, ವರದಿ ಬಂದನಂತರ ಮುಂದಿನ ತನಿಖೆ. ಅಲ್ಲಿಯವರೆಗೆ ಆಗಿರುವುದು ಉತ್ಖನನ ಅಷ್ಟೇ, ಅದು ತನಿಖೆ ಅಲ್ಲ ಎಂದು ತಿಳಿಸಿದರು. ಆ ವ್ಯಕ್ತಿಯನ್ನು ಯಾಕೆ ವಶಕ್ಕೆ ಪಡೆದಿಲ್ಲ ಅಂತ ವಿಪಕ್ಷದವರು ಪ್ರಶ್ನೆ ಮಾಡಿದ್ದಾರೆ. ವಿಟ್ನೆಸ್ ಪ್ರೊಟೆಕ್ಷನ್ ಆಕ್ಟ್ ಪ್ರಕಾರ ನಡೆದುಕೊಂಡಿದ್ದೇವೆ. ಹಾಗಾಗಿ ಬಂಧಿಸಿಲ್ಲ. ಮುಂದೆಯೂ ಗುಂಡಿ ತೆಗೆಯಬೇಕಾ ಬೇಡವೇ ಎಂಬುದರ ಬಗ್ಗೆ ಸರ್ಕಾರ ತೀರ್ಮಾನ ಮಾಡುವುದಿಲ್ಲ, ಎಸ್‌ಐಟಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.
ಎಸ್‌ಐಟಿ ತನಿಖೆಗೆ ತಂತ್ರಜ್ಞಾನವನ್ನು ಬಳಸಿ ಎಂದು‌ ಬಿಜೆಪಿಯವರು ಸಲಹೆ ಕೊಟ್ಟಿದ್ದಾರೆ, ಅದನ್ನು ಪರಿಗಣಿಸಲಾಗುವುದು ಎಂದರು. ಯೂ ಟ್ಯೂಬರ್‌ಗಳು, ಸಾಮಾಜಿಕ ಮಾಧ್ಯಮಗಳು ಧರ್ಮಸ್ಥಳದ ಪ್ರಕರಣದ ಬಗ್ಗೆ ಏನೇನೋ ಹಾಕುವುದನ್ನು ಈಗಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಸರಕಾರವು ಕ್ರಮಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಪ್ರಮುಖ ಸುದ್ದಿ :-   ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement