ಕಾರವಾರ: ಹವಾಮಾನ ಇಲಾಖೆ (IMD) ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 11 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್ 19ರಂದು ರಜೆ ಘೋಷಿಸಲಾಗಿದೆ.
ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ರೆಡ್ ಅಲರ್ಟ್ ಘೋಷಣೆಯ ಹಿನ್ನೆಲೆಯಲ್ಲಿ, ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ಮತ್ತು ಹಳಿಯಾಳ ತಾಲ್ಲೂಕಿನ ಎಲ್ಲ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಮಂಗಳವಾರ ಆಗಸ್ಟ್ 19ರಂದು ರಜೆ ಘೋಷಿಸಲಾಗಿದೆ.
ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ ರೆಡ್ ಅಲರ್ಟ್ ಪ್ರಕಾರ, ಆಗಸ್ಟ್ 20ರವರೆಗೆ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.


ನಿಮ್ಮ ಕಾಮೆಂಟ್ ಬರೆಯಿರಿ