ಮಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣ ಸೋಮವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಪ್ರೌಢ ಶಾಲೆಗಳಿಗೆ ಆಗಸ್ಟ್ 18ರಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಸೋಮವಾರ (ಆಗಸ್ಟ್ 18) ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಇರುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಪ್ರೌಢ ಶಾಲೆಗಳಿಗೆ ಆಗಸ್ಟ್ 18ರಂದು ರಜೆ ಘೋಷಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ