ಉದ್ಯಮಿ, ರಾಜಕೀಯ ಧುರೀಣ ಯಶೋಧರ ನಾಯ್ಕ ನಿಧನ

ಕಾರವಾರ: ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಯಶೋಧರ ನಾಯ್ಕ (69)  ಇಂದು, ಮಂಗಳವಾರ (ಆಗಸ್ಟ್‌ 19) ಮುಂಬೈನಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಳ್ಕೋಡು ಮೂಲದವರಾದ ಯಶೋಧರ ನಾಯ್ಕ ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನಲ್ಲಿ ನೆಲೆಸಿ, ಸಾರಿಗೆ ಉದ್ಯಮದಲ್ಲಿ ಯಶಸ್ಸು ಗಳಿಸಿದ್ದರು. ನಂತರ ರಾಜಕೀಯಕ್ಕೂ ಪ್ರವೇಶಿಸಿದ ಅವರು ಭಟ್ಕಳದಿಂದ ಜೆಡಿಎಸ್ ಅಭ್ಯರ್ಥಿಯಾಗಿ, ನಂತರ ಕುಮಟಾದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ನಂತರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ‘ಯಶೋಧರ ನಾಯ್ಕ ಟ್ರಸ್ಟ್’ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ನೂರಾರು ಜನರಿಗೆ ನೆರವು ನೀಡಿದ್ದರು.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement