ಬೆಳಗಾವಿ : ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಬುಧವಾರ (ಆಗಸ್ಟ್ 20) ರಜೆ ಘೋಷಿಸಿ ಆದೇಶಿಸಿದೆ.
ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್)ರ ಅಡಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರd ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ಬೆಳಗಾವಿ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳು, ಅಂಗನವಾಡಿಗಳು ಮತ್ತು ಜಿಲ್ಲೆಯ ಎಲ್ಲ ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್ 20ರಂದು ರಜೆ ಘೋಷಿಸಿ ಆದೇಶಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ