ಗೋಕಾಕ | ಮಳೆಗೆ ಮನೆ ಕುಸಿದುಬಿದ್ದು ಮಹಿಳೆ ಸಾವು, ಇಬ್ಬರಿಗೆ ಗಾಯ

ಬೆಳಗಾವಿ : ಭಾರಿ ಮಳೆಯಿಂದಾಗಿ ಮನೆ ಕುಸಿದು ಬಿದ್ದು ಮಹಿಳೆಯೊಬ್ಬರು ಸಮೃತೊಟ್ಟ ಘಟನೆ ಜಿಲ್ಲೆಯ ಗೋಕಾಕದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ.
ಗೋಕಾಕದ ಸಂಗಮ ನಗರದ ಫರೀದಾಬಾನು ಶಕೀಲ್ ಅಹ್ಮದ್ ಕನವಾಡ (50) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅವರ ಪುತ್ರ  ಮತ್ತು ಪುತ್ರಿ  ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಣ್ಣಿನ ಗೋಡೆ ಕುಸಿದು ಬಿದ್ದ ಪರಿಣಾಮ ದುರಂತ ಸಂಭವಿಸಿದೆ. ಸ್ಥಳಕ್ಕೆ ಗೋಕಾಕ್ ತಹಶೀಲ್ದಾರ್ ಮೋಹನ ಭಸ್ಮೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

ನಿಮ್ಮ ಕಾಮೆಂಟ್ ಬರೆಯಿರಿ

advertisement