ವೀಡಿಯೊ…| ಹೊನ್ನಾವರ : ಲಿಂಗನಮಕ್ಕಿ ಅಣೆಕಟ್ಟಿನಿಂದ ಶರಾವತಿ ನದಿಗೆ 15000 ಕ್ಯೂಸೆಕ್ ನೀರು ಬಿಡುಗಡೆ

ಕಾರವಾರ : ಶರಾವತಿಯ ಲಿಂಗನಮಕ್ಕಿ ಜಲಾಶಯದಿಂದ ಇಂದು ಮಂಗಳವಾರ (ಆಗಸ್ಟ್‌ 19) ನೀರನ್ನು ಹೊರಕ್ಕೆ ಬಿಡಲಾಗಿದೆ. ಲಿಂಗನಮಕ್ಕಿ ಜಲಾಶಯದಿಂದ ಒಟ್ಟು 15000 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ಮೊದಲು ಮೂರು ಗೇಟಗಗಳನ್ನು ತೆಗೆದು ನೀರನ್ನು ಹೊರಕ್ಕೆ ಕಳುಹಿಸಲಾಗಿತ್ತು. ನಂತರ 11 ಗೇಟ್‌ಗಳನ್ನು ತೆರೆದು ಒಟ್ಟು 15000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹೀಗಾಗಿ ಲಿಂಗನಮಕ್ಕಿ ಜಲಾಶಯದ ತಗ್ಗು ಪ್ರದೇಶದಲ್ಲಿ ಶರಾವತಿ ನದಿಯ ಇಕ್ಕೆಲಗಳ ಪ್ರದೇಶದಲ್ಲಿರುವ ಹೊನ್ನಾವರ ತಾಲೂಕಿನ ವ್ಯಾಪ್ತಿಯಲ್ಲಿರುವ ತಳಮಟ್ಟದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.
ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಆಗಸ್ಟ್‌ 20 ಬೆಳಗ್ಗೆ ವರೆಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ.

ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ಗಣನೀಯವಾಗಿ ಏರುತ್ತಿದೆ. ಹೀಗಾಗಿ ಜಲಾಶಯದಿಂದ ಆಗಸ್ಟ್‌ 19 ರಂದು ಬೆಳಗ್ಗೆ 10 ಗಂಟೆಯಿಂದ ಹೊರಬಿಡಲಾಗುವುದು ಎಂದು ಸೋಮವಾರವೇ ತಿಳಿಸಲಾಗಿತ್ತು.
ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು ಆಗಸ್ಟ್‌ 18 ರಂದು ಮಧ್ಯಾಹ್ನ 1 ಗಂಟೆಗೆ ಜಲಾಶಯದ ನೀರಿನ ಮಟ್ಟವು 1815.50 ಅಡಿಗಳಿಗೆ ತುಂಬಿತ್ತು. ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 59,891 ಕ್ಯೂಸೆಕ್‌ ಗಳಿಗಿಂತಲೂ ಅಧಿಕವಾಗಿದ್ದು ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣವು ಇದೇ ಪ್ರಮಾಣದಲ್ಲಿ ಮುಂದುವರೆದರೆ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಆಗಸ್ಟ್‌ 19 ರಂದು ಬೆಳಗ್ಗೆ 10 ಗಂಟೆಯಿಂದ ಹೊರಬಿಡಲಾಗುವುದು ಜಲಾಶಯದ ಕಾರ್ಯನಿರ್ವಾಹಕ ಅಭಿಯಂತರರು ಕೆ ಪಿ ಸಿ ಲಿಂಗನಮಕ್ಕಿ ಸೋಮವಾರ (ಆಗಸ್ಟ್‌ 18) ತಿಳಿಸಿದ್ದರು. ನಂತರ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಲಕ್ಷ್ಮೀಪ್ರಿಯಾ ಕೆ. ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement