ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಮಾಸ್ಕ್‌ ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಆಗುತ್ತಿದೆ. ನೇತ್ರಾವತಿ ನದಿ ದಡದಲ್ಲಿ ನೂರಾರು ಮಹಿಳೆಯರು, ಯುವತಿಯರ ಶವಗಳನ್ನು ಹೂತು ಹಾಕಿದ್ದೇನೆ ಎಂಬ ಅನಾಮಿಕನ ಹೇಳಿಕೆ ಕುರಿತು ಆತನ ಜೊತೆಗೆ ಕೆಲಸ ಮಾಡಿದ್ದ ಸ್ನೇಹಿತ ಎಂದು ಹೇಳಿಕೊಂಡಿರುವ ವ್ಯಕ್ತಿ ನೀಡಿರುವ ಹೇಳಿಕೆ ಪ್ರಕರಣದ ಬಗ್ಗೆ ಮತ್ತೊಂದು ಟ್ವಿಸ್ಟ್‌ ನೀಡಿದೆ.
ಮಾಸ್ಕ್ ಮ್ಯಾನ್ ಹೇಳಿದಂತೆ ಧರ್ಮಸ್ಥಳದ ಬಳಿ ನೂರಾರು, ಸಾವಿರಾರು ಶವಗಳನ್ನು ಹೂತು ಹಾರುವುದು ಸುಳ್ಳು ಎಂದು ಅನಾಮಿಕ ಮಾಸ್ಕ್ ಮ್ಯಾನ್ ಸ್ನೇಹಿತ ರಾಜು ಎಂಬಾತ ಮಾಧ್ಯಗಳಿಗೆ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳದ ಬಗ್ಗೆ ಮುಸುಕುಧಾರಿ ವ್ಯಕ್ತಿಯ ಹೇಳಿಕೆಗಳು ಸತ್ಯಕ್ಕೆ ದೂರ. ಈ ರೀತಿ ಹೇಳಿಕೆ ಕೊಡುತ್ತಿರುವುದು ಸರಿಯಲ್ಲ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧ ನನ್ನನ್ನು ಎಸ್ಐಟಿ ಅಧಿಕಾರಿಗಳು ಅರ್ಧ ಗಂಟೆ ವಿಚಾರಣೆ ನಡೆಸಿದರು. ನನಗೆ ಗೊತ್ತಿರುವ ಮಾಹಿತಿಯನ್ನು ನೀಡಿದ್ದೇನೆ’ ಎಂದು ಈ ಹಿಂದೆ ಮಾಸ್ಕ್ ಮ್ಯಾನ್ ಜೊತೆಗೆ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಮಂಡ್ಯ ಮೂಲದ ರಾಜು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ‌ 10 ವರ್ಷಗಳ ಹಿಂದೆ ನಾಲ್ಕು ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ನಮಗೆ ಮಾಹಿತಿ ಕಚೇರಿಯಿಂದ ವಿಷಯ ತಿಳಿಸಲಾಗಿತ್ತು. ಆಗ ನಾವು ಹೆಣಗಳನ್ನು ಎತ್ತಿ ದಡಕ್ಕೆ ತರುತ್ತಿದ್ದೆವು. ನಂತರ ಅದನ್ನು ಅಂಬುಲೆನ್ಸ್‌ ಮೂಲಕ ಬೆಳ್ತಂಗಡಿಗೆ ಸಾಗಿಸಲಾಗುತ್ತಿತ್ತು ಎಂದು ಅವರು ತಿಳಿಸಿದ್ದಾರೆ.
ನೂರಾರು ಶವಗಳನ್ನು ಹೂತಿದ್ದೇನೆ ಎದು ಹೇಳಿರುವುದು ಸುಳ್ಳು. ಅಷ್ಟೊಂದು ಶವ ಹೂತಿದ್ದರೆ ಅಗೆದಾಗ ಮೂಳೆಗಳಾದರೂ ಸಿಗಬೇಕಿತ್ತಲ್ಲ. ಸುಳ್ಳು ಆರೋಪ ಮಾಡುವುದು ಸರಿಯಲ್ಲ. ಇದು ಬಹಳ ತಪ್ಪು ಎಂದು ಹೇಳಿದರು. ಮೊದಲು ಇಲ್ಲಿ ನನ್ನ ಅತ್ತೆ, ಮಾವ ಸಚ್ಛತಾ ಕೆಲಸ ಮಾಡುತ್ತಿದ್ದರು. ನಂತರ ಅವರಿಗೆ ಆರೋಗ್ಯ ಸರಿಯಿಲ್ಲದ ಕಾರಣ ನಾನು ಹೋಗಿದ್ದೆ. ಈ ಸಂದರ್ಭದಲ್ಲಿ ನಮ್ಮ ಕುಟುಂಬ ಮತ್ತು ಮಾಸ್ಕ್‌ ಮ್ಯಾನ್‌ ಕುಟುಂಬ ಅಕ್ಕಪಕ್ಕದ ಮನೆಯಲ್ಲಿ ನೆಲೆಸಿತ್ತು ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ದೇವಸ್ಥಾನ, ನೇತ್ರಾವತಿ ಸ್ನಾನಘಟ್ಟ, ಬಾಹುಬಲಿ ಬೆಟ್ಟದಲ್ಲೆಲ್ಲ ಸ್ವಚ್ಛತಾ ಕೆಲಸ ಮಾಡಿದ್ದೇನೆ. ಮೂರು ತಿಂಗಳಿಗೊಮ್ಮೆ ಕೆಲಸದ ಸ್ಥಳ ಬದಲಾವಣೆ ಆಗುತ್ತಿತ್ತು. ಮಾಹಿತಿ ಕಚೇರಿಯಿಂದ ಬರುತ್ತಿದ್ದ ಸೂಚನೆಯ ಮೇರೆಗೆ ಕೆಲಸ ಮಾಡುತ್ತಿದ್ದೆವು. ಮಕ್ಕಳು ನಾಪತ್ತೆಯಾಗಿದ್ದರೆ ಮೈಕ್‌ ಮೂಲಕ ಪ್ರಕಟಣೆ ನೀಡಲಾಗುತ್ತಿತ್ತು. ಮಾಹಿತಿ ಕಚೇರಿ ಮತ್ತು ನೇತ್ರಾವತಿ ಬಳಿ ಪ್ರಕಟಣೆ ಮಾಡಲಾಗುತ್ತಿತ್ತು. ಮಕ್ಕಳು ಸಿಕ್ಕಿದರೆ ಮಾಹಿತಿ ಕಚೇರಿಗೆ ಬಿಡುತ್ತಿದ್ದರು. ನಂತರ ಪೋಷಕರ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಮಕ್ಕಳನ್ನು ಹಸ್ತಾಂತರ ಮಾಡಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.
ಒಟ್ಟು ನಾಲ್ಕು ಕುಟುಂಬಗಳು ಸ್ವಚ್ಛತಾ ಕೆಲಸ ಮಾಡುತ್ತಿದ್ದವು. ಮಾಹಿತಿ ಕಚೇರಿ ಬಿಟ್ಟರೆ ಬೇರೆ ಯಾರೂ ನಮಗೆ ಕೆಲಸ ಹೇಳುತ್ತಿರಲಿಲ್ಲ. ನಮ್ಮ ಜೊತೆ ಕೆಲಸ ಮಾಡುವಾಗ ಅನಾಮಿಕ ಚೆನ್ನಾಗಿಯೇ ಇದ್ದ. ನಾವು ಬರುವ ಮೊದಲೇ ಅವರ ಕುಟುಂಬ ಅಲ್ಲಿ ನೆಲೆಸಿತ್ತು. ನಾನು ಕೆಲಸ ಬಿಟ್ಟು ಬಂದ ನಂತರವೂ ಆತ ಅಲ್ಲಿ ಕೆಲಸ ಮಾಡುತ್ತಿದ್ದ. ನಾನು ಕೆಲಸ ಮಾಡಿದ್ದ ನಾಲ್ಕು ವರ್ಷಗಳ ಅವಧಿಯಲ್ಲಿ ನೇತ್ರಾವತಿ ಬಳಿ ಎರಡು ಶವ ಸಿಕ್ಕಿತ್ತು. ಪುರುಷ ಮತ್ತು ಮಹಿಳೆಯ ಶವ ಸಿಕ್ಕಿತ್ತು. ಸಿಕ್ಕಿದ ಶವಗಳನ್ನು ಹೂಳುತ್ತಿರಲಿಲ್ಲ. ಅಂಬುಲೆನ್ಸ್‌ ಬರುತ್ತಿತ್ತು. ವೈದ್ಯರು, ಪೊಲೀಸರು ಬರುತ್ತಿದ್ದರು. ನಂತರ ಆ ಮೃತದೇಹವನ್ನು ಬೆಳ್ತಂಗಡಿಗೆ ಕಳುಹಿಸಲಾಗುತ್ತಿತ್ತು. ನೂರಾರು ಶವ ಸಿಕ್ಕಿದೆ ಎಂಬುದು ಸುಳ್ಳು ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement