ಧರ್ಮಸ್ಥಳ ಪ್ರಕರಣ : ಯೂ ಟ್ಯೂಬರ್ ಸಮೀರಗೆ ಕೋರ್ಟಿನಿಂದ ನಿರೀಕ್ಷಣಾ ಜಾಮೀನು

ಮಂಗಳೂರು : ಧರ್ಮಸ್ಥಳ ಪ್ರಕರಣದ ಬಗ್ಗೆ ಎಐ ವೀಡಿಯೊ ಮಾಡಿ ಜನರಲ್ಲಿ ಕೋಮು ವೈಷಮ್ಯ ಮೂಡಿಸಲು ಪ್ರಯತ್ನಿಸಿದ ಆರೋಪದ ಮೇರೆಗೆ ಧರ್ಮಸ್ಥಳ ಪೊಲೀಸರು ದಾಖಲಿಸಿದ್ದ ಸುಮಟೋ ಕೇಸ್ ಗೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ.
ಯೂಟ್ಯೂಬರ್‌ ಸಮೀರ್‌ ಎಂ.ಡಿ.ಗೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆತನ ವಿರುದ್ಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿತ್ತು. ಆತನನ್ನು ಬಂಧಿಸಲು ಪೊಲೀಸರು ಬೆಂಗಳೂರಿಗೆ ತೆರಳಿದ್ದರು.
ಧರ್ಮಸ್ಥಳ ವಿರುದ್ಧ ವೀಡಿಯೊ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಜುಲೈ 12ರಂದು ಸಮೀರ್​ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು. ಅಲ್ಲದೆ ಸಮೀರ್‌ನನ್ನು ವಶಕ್ಕೆ ಪಡೆಯಲು ಧರ್ಮಸ್ಥಳ ಪೊಲೀಸರು ಬೆಂಗಳೂರಿನ ಬನ್ನೇರುಘಟ್ಟದ ನಿವಾಸಕ್ಕೆ ಆಗಮಿಸಿದ್ದರು.

ಈ ಮಧ್ಯೆ, ಆಗಸ್ಟ್ 19 ರಂದು ಜಾಮೀನು ಕೋರಿ ಸಮೀರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ, ಇಂದು, ಗುರುವಾರ ಆರೋಪಿಗೆ ಜಾಮೀನು ನೀಡಿದೆ. ಇದರೊಂದಿಗೆ ಸಮೀರ್ ಬಂಧನದಿಂದ ಪಾರಾಗಿದ್ದಾರೆ.
ಧರ್ಮಸ್ಥಳದ ಕುರಿತು ಎಐ ತಂತ್ರಜ್ಞಾನ ಬಳಸಿ ವೀಡಿಯೊ ಮಾಡಿದ್ದ ಸಮೀರ್ ಎಂಡಿ ಸಾವಿರ ಜನರನ್ನು ಅತ್ಯಚಾರ ಮಾಡಿ ಕೊಲೆ ಮಾಡಲಾಗಿದೆ. ಇದನ್ನು ಕೇಳಿದ್ರೆ ನಿಮ್ಮ ರಕ್ತ ಕುದಿಯಲ್ವಾ? ಕರ್ನಾಟಕದ ಮೂಲೆ ಮೂಲೆಯಿಂದ ಬೀದಿಗಿಳಿದು ಪ್ರತಿಭಟನೆ ಮಾಡಬೇಕು ಎಂದು ಸಂದೇಶ ನೀಡಿ ದೊಂಬಿ ಮಾಡುವ ಉದ್ದೇಶದಿಂದ ಜನರನ್ನು ಉದ್ರೇಕಗೊಳಿಸಿದ ಆರೋಪ ಹಾಗೂ ಸಾಮಾಜಿಕ ನೆಮ್ಮದಿಯ ಹಾಳಾಗುವ ಉದ್ದೇಶವುಳ್ಳ ವೀಡಿಯೊ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ BNS 240, 192, 353(1)(b) ಅಡಿಯಲ್ಲಿ ಪ್ರಕರಣ‌ ದಾಖಲಾಗಿತ್ತು.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement