ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕರಿಂದ ಈ ಬಾರಿಯ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು (Mysuru Dasara) ಈ ಬಾರಿ ಬೂಕರ್ ಪ್ರಶಸ್ತಿ ಪುರಸ್ಕೃತ ಕನ್ನಡದ ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಬಾನು ಮುಷ್ತಾಕ್ ಅವರ ಕೃತಿ ಎದೆಯ ಹಣತೆಗೆ ಬುಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ರೈತ ಮತ್ತು ಕನ್ನಡ ಚಳವಳಿಯಲ್ಲೂ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನಿಸಿದ್ದೇವೆ ಎಂದರು.
ಈ ಬಾರಿ ಶಾಸ್ತ್ರದ ಪ್ರಕಾರ ಹನ್ನೊಂದು ದಿನ ದಸರಾ ನಡೆಯಲಿದೆ. ಅಕ್ಟೋಬರ್ 2 ರಂದು ವಿಜಯದಶಮಿ ಆಚರಿಸಲಾಗುತ್ತದೆ. ಮೈಸೂರು ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ದೊರೆತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ದಸರಾ ವೀಕ್ಷಣೆಗೆ ಆಗಮಿಸಬೇಕೆಂದು ಪತ್ರ ಬರೆದಿದ್ದೇನೆ ಎಂದರು.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement