ಧರ್ಮಸ್ಥಳ ಪ್ರಕರಣ : ಸತತ 5 ಗಂಟೆ ಯೂ ಟ್ಯೂಬರ್‌ ಸಮೀರ್‌ ವಿಚಾರಣೆ

ಮಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣಕ್ಕೆ (Dharmasthala case) ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಗೆ ಹಾಜರಾಗಿದ್ದ ಯೂಟ್ಯೂಬರ್‌ ಎಂ.ಡಿ. ಸಮೀರ್ ಸತತ 5 ಗಂಟೆ ವಿಚಾರಣೆ ಎದುರಿಸಿದ್ದಾನೆ. ಸಮೀರ್ ವಾಯ್ಸ್ ಸ್ಯಾಂಪಲ್ ಪಡೆದಿರುವ ಪೊಲೀಸರು, ಸೋಮವಾರವೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದಿಬಂದಿದ್ದು, ಮೊಬೈಲ್ ಹಾಗೂ ಯೂಟ್ಯೂಬ್‌ಗೆ ವೀಡಿಯೊ ಅಪ್‌ಲೋಡ್ ಮಾಡಿದ್ದ ಲ್ಯಾಪ್‌ಟಾಪ್ ತರುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ಸಮೀರ್​ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದರು. ಇದೇ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್​ನನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ಹೋಗಿದ್ದರು.

ಆಗಸ್ಟ್ 19ರಂದು ಸಮೀರ್​ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಸಮೀರ್​ ವಿಚಾರಣೆಗೆ ಸಹಕಾರ ನೀಡಬೇಕು ಎಂದು ಷರತ್ತು ವಿಧಿಸಿತ್ತು.
ಹೀಗಾಗಿ ಭಾನುವಾರ ಮಧ್ಯಾಹ್ನ ಯೂಟ್ಯೂಬರ್​ ಸಮೀರ್ ವಕೀಲರೊಂದಿಗೆ ಬೆಳ್ತಂಗಡಿ ಠಾಣೆಗೆ ಬಂದಿದ್ದ. ಠಾಣೆಗೆ ಬಂದ ಈತನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸಮೀರ್ ವಾಯ್ಸ್​ ಅನ್ನು ಪೊಲೀಸರು ಎಫ್ಎಸ್ಎಲ್​ಗೆ ಕಳುಹಿಸಲಿದ್ದಾರೆ. ಈಗಾಗಲೇ ಪೊಲೀಸರು ಸತತ ಐದು ಗಂಟೆಗಳ ಕಾಲ ಎಐ (AI) ವೀಡಿಯೊ ಪ್ರಕರಣ, ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಪ್ರಕರಣ, ಉಜಿರೆ ಖಾಸಗಿ ಆಸ್ಪತ್ರೆ ಬಳಿ ಗಲಾಟೆ ಸಂಬಂಧ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಸಾಗರ : ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ವಿದ್ಯಾರ್ಥಿ ಸಾವು

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement