ಶಿರಸಿ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಶಿರಸಿ: ಹಳೆಯ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕಳೆದ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಪ್ರಸ್ತುತ ನವದೆಹಲಿಯಲ್ಲಿ ವಾಸವಾಗಿದ್ದು, ದಾಂಡೇಲಿಗೆ ಬರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಅಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
1990ರ ನವೆಂಬರ್ 29 ರಂದು ಶಿರಸಿಯ ಐದು ರಸ್ತೆಯ ಬಳಿ ದಿನಕರ ನಾರಾಯಣ ಶೆಟ್ಟಿ ಎಂಬವರಿಗೆ ದೀಪಕ ವಿಠ್ಠಲ ಭಂಡಾರಿ ಎಂಬಾತ ಹಲ್ಲೆ ಮಾಡಿದ ಕುರಿತು ದೂರು ದಾಖಲಾಗಿತ್ತು. ನಾರಾಯಣ ನಾಗಪ್ಪ ಶೆಟ್ಟಿ ನೀಡಿದ ದೂರಿನ ಮೇರೆಗೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಪ್ರಕರಣ ದಾಖಲಾದಾಗಿನಿಂದಲೂ ಆರೋಪಿ ದೀಪಕ ಭಂಡಾರಿ ನಾಪತ್ತೆಯಾಗಿದ್ದ. ಕಳೆದ 35 ವರ್ಷಗಳಿಂದ ಆತ ನ್ಯಾಯಾಲಯಕ್ಕೂ ಹಾಜರಾಗದೇ, ಪೊಲೀಸರಿಗೂ ಸಿಗದೆ ತಲೆಮರೆಸಿಕೊಂಡಿದ್ದ.

ಈತನಿಗಾಗಿ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಸುಳಿವು ಸಿಕ್ಕಿರಲಿಲ್ಲ. ಈ ಪ್ರಕರಣ ಭೇದಿಸಲು ರಚಿಸಿದ ವಿಶೇಷ ತಂಡಕ್ಕೆ ಆರೋಪಿಯು ಪ್ರಸ್ತುತ ನವದೆಹಲಿಯಲ್ಲಿ ವಾಸವಾಗಿದ್ದು, ದಾಂಡೇಲಿಗೆ ಬರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು.
ಮಾಹಿತಿಯನ್ನಾಧರಿಸಿ ಕಾರ್ಯಪ್ರವೃತ್ತರಾದ ಪೊಲೀಸರು, ಸೋಮವಾರ (ಆಗಸ್ಟ್‌ 25) ದಾಂಡೇಲಿಗೆ ಬಂದ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೃಷ್ಣಮೂರ್ತಿ ಜಿ. ಹಾಗೂ ಜಗದೀಶ ನಾಯ್ಕ, ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಶಿರಸಿ ನಗರ ಠಾಣೆಯ ಪಿಎಸ್‌ಐಗಳಾದ ನಾಗಪ್ಪ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ನಾರಾಯಣ ಆರ್. ರಾಠೋಡ್ (ತನಿಖೆ) ನೇತೃತ್ವದಲ್ಲಿ ಸಿಬ್ಬಂದಿ ಹನುಮಂತ ಕಬಾಡಿ, ತುಕಾರಾಮ ಬಣಕಾರ, ರಾಮಯ್ಯ ಪೂಜಾರಿ, ಸದ್ದಾಂ ಹಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ಹನುಮಂತ ಮಾಕಾಪುರ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಉದಯ ಗುನಗಾ ಮತ್ತು ಬಬನ್ ಕದಂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ ಪ್ರಕಟಣೆ ತಿಳಿಸಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement