ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆಗಸ್ಟ್ 31 ರವರೆಗೂ ಭಾರೀ ಮಳೆ ಆರ್ಭಟ ಇರಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲಿಯೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ ೨೮ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ನಂತರ ಆಗಸ್ಟ್ 31 ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೀದರ, ಕಲಬುರ್ಗಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆ ಆಗಸ್ಟ್ 28-29 ರಂದು ಯೆಲ್ಲೋ ಅಲರ್ಟ್ ನೀಲಾಗಿದೆ.
ಉಳಿದಂತೆ ಬೆಳಗಾವಿ, ಧಾರವಾಡ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಹವಾಮಾನ ಇಲಾಖೆ ಸೂಚನೆ ಪ್ರಕಾರ ಕರಾವಳಿ ಭಾಗದಲ್ಲಿ ಪ್ರತಿ ಗಂಟೆಗೆ 30-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಕರ್ನಾಟಕ ಕರಾವಳಿ ತೀರದಲ್ಲಿ ಅಲ್ಲಲ್ಲಿ ಅತ್ಯಧಿಕ ಮಳೆ ಸುರಿಯಲಿದೆ ಎಂದು ತಿಳಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ