ಮಂಗಳೂರು | ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು, ಹಲವರಿಗೆ ಗಾಯ

ಮಂಗಳೂರು : ಕೆ ಸಿರೋಡ್‌ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ನಿಯಂತ್ರಣ ತಪ್ಪಿ ಬಸ್ ತಂಗುದಾಣ ಹಾಗೂ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬ ಐವರು ಸೇರಿ 6 ಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಇಂದು, ಗುರುವಾರ (ಆಗಸ್ಟ್‌ 28) ಮಧ್ಯಾಹ್ನ 1:30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದ್ದು, ಕಾಸರಗೋಡಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ಫೇಲ್ ಆಗಿದ್ದರಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ವ್ಯಕ್ತಿಗಳಿಗೆ ಹಾಗೂ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಬಾಲಕಿ ಸೇರಿ ಒಂದೇ ಕುಟುಂಬದ ಐವರು ಮತ್ತು ಆಟೋ ಚಾಲಕ ಮೃತಪಟ್ಟಿದ್ದಾರೆ. ಎಂದು ಹೇಳಲಾಗಿದೆ. ಅಪಘಾತದ ಬಳಿಕ ಬಸ್‌ ಹಿಂದೆ ಚಲಿಸಿ ರಸ್ತೆ ಬದಿಯಲ್ಲಿ ನಿಂತಿದ್ದವರ ಮೇಲೂ ಹರಿದಿದ್ದು, ಅಲ್ಲದೆ ಅಲ್ಲೆ ನಿಲ್ಲಿಸಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಆ ರಿಕ್ಷಾ ಕೂಡಾ ಪಲ್ಟಿಯಾಗಿದೆ.
ಮೃತರನ್ನು ರಿಕ್ಷಾ ಚಾಲಕ ಹೈದರ್‌ (47), ಅವ್ವಮ್ಮ(72), ಖದೀಜಾ (60), ಹಸ್ನಾ (11), ನಫೀಸಾ (52), ಆಯಿಷಾ ಫಿದಾ (19) eMdu ಗುರುತಿಸಲಾಗಿದೆ. ಲಕ್ಷ್ಮಿ(61), ಸುರೇಂದ್ರ (39) ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡ ಕೆಲವರನ್ನು ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement