ಕಾರವಾರ : ಕರ್ನಾಟಕದಾದ್ಯಂತ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಲಿಂಗನಮಕ್ಕಿ ಹಾಗೂ ಗೇರುಸೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಸಂಗ್ರಹ ಹೆಚ್ಚಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಡ್ಯಾಂನಿಂದ ಒಟ್ಟಾರೆ 75000 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.
ಭಾರಿ ಮಳೆಯಿಂದಾಗಿ ಗೇರುಸೊಪ್ಪದ ಬಳಿಯ ಶರಾವತಿ ನದಿಯ ಗೇರುಸೊಪ್ಪ ಜಲಾಶಯ ಕೂಡ ಭರ್ತಿಯಾಗುತ್ತಿದ್ದು ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗೇರುಸೊಪ್ಪ ಜಲಾಶಯದಿಂದ ವಿದ್ಯುತ್ ಉತ್ಪಾದನೆಗೆ ಬೇಕಾದ ನೀರು ಸೇರಿದಂತೆ ಒಟ್ಟಾರೆಯಾಗಿ ಈಗ 75000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ ಎಂದು ತಿಳಿಸಲಾಗಿದೆ. ಹೀಗಾಗಿ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ