ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರ ವರೆಗೂ ಭಾರೀ ಮಳೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದು ಸೆಪ್ಟೆಂಬರ್ 5ರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್‌ 30ರಂದು ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಆಗಸ್ಟ್‌ 30ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅತಿ ಭಾರಿ ಮಳೆ ಬೀಳುವ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement