ಭಾರಿ ಮಳೆ ; ಈ ಜಿಲ್ಲೆಗಳಲ್ಲಿ ಇಂದು (ಆಗಸ್ಟ್‌ 30) ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರ ವರೆಗೂ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶನಿವಾರ (ಆಗಸ್ಟ್ 30) ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ರಜೆ
ಜಿಲ್ಲೆಯಲ್ಲಿ ತೀವ್ರವಾರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್.ಪುರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಶನಿವಾರ (ಆಗಸ್ಟ್ 30) ರಜೆ ಘೋಷಿಸಲಾಗಿದೆ.
ಅಲ್ಲದೆ, ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ ಹಾಗೂ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಲಿಂಗದಹಳ್ಳಿ ಹೋಬಳಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಜೋರಾಗಿ ಸುರಿಯುತ್ತಿರುವುದರಿಂದ ಶನಿವಾರ (ಆಗಸ್ಟ್ 30)ಜಿಲ್ಲೆಯ ಶಾಲೆಗಳಿಗೆ ರಜೆ ನೀಡಲಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಆಗಸ್ಟ್ 30ರಂದು ಜಿಲ್ಲೆಯ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಣೆ ಮಾಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ; ಹೊನ್ನಾವರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ ಮುಂದುವರಿದೆ. ಶನಿವಾರ (ಆಗಸ್ಟ್ 30) ಹೊನ್ನಾವರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ತಹಶೀಲ್ದಾರ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement