ಬೆಳಗಾವಿ | ಕ್ಯಾಂಪ್‌ ಪೊಲೀಸರ ಭರ್ಜರಿ ಕಾರ್ಯಾಚರಣೆ ; 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಬೆಳಗಾವಿ : ಇಲ್ಲಿನ ಕ್ಯಾಂಪ್ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಮನೆ ಕಳ್ಳರನ್ನು ಬಂಧಿಸಿ 85 ಲಕ್ಷ ಮೌಲ್ಯದ ಬಂಗಾರ ಆಭರಣಗಳು ವಶಕ್ಕೆ ಪಡೆದಿದ್ದಾರೆ.
ಶ್ರಮೇಶ ಸುರೇಶ ರೇಡೆಕರ ಎಂಬವರು ತಮ್ಮ ಮನೆಯಲ್ಲಿ ಒಟ್ಟು 981.1 ಗ್ರಾಂ ತೂಕದ ಬಂಗಾರದ ಆಭರಣಗಳು ಕಳ್ಳತನವಾದ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ದೂರು ದಾಖಲಿಸಿದ ನಂತರ ಪೊಲೀಸರು ತನಿಖೆಗೆ ಮುಂದಾದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಈ ಪ್ರಕರಣದಲ್ಲಿ ಅಣ್ಣಾಪೂರ್ಣಾ ಜ್ಯೋತಿಬಾ ಬೆಳಗುಂದಕರ ಹಾಗೂ ಜ್ಯೋತಿಬಾ ಗುಂಡು ಬೆಳಗುಂದಕರ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ದೂರು ನೀಡದ ವ್ಯಕ್ಯಿಯ ಮನೆಯಲ್ಲಿ ಕಳ್ಳತನ ಮಾಡಿದ್ದ ಒಟ್ಟು 981.1 ಗ್ರಾಂ ತೂಕದ ಬಂಗಾರದ ಆಭರಣಗಳಲ್ಲಿ ಒಟ್ಟು 877.4 ಗ್ರಾಂ ತೂಕದ ಬಂಗಾರ ಆಭರಣಗಳನ್ನು ಯಥಾವತ್ತಾಗಿ ಸಿಕ್ಕಿದೆ. ಅವುಗಳ ಒಟ್ಟು ಮೌಲ್ಯ 85 ಲಕ್ಷ ರೂಪಾಯಿಗಳಾಗಿವೆ. ಈ ವಿಶೇಷ ಕಾರ್ಯಾಚರಣೆ ತಂಡದಲ್ಲಿ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳ ಕೆಲಸಕ್ಕೆ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement