ರಾಜ್ಯ ಜನತೆಗೆ ಮತ್ತೊಂದು ಶಾಕ್‌ ; ಇಂದಿನಿಂದ ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಡಬಲ್‌…!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು ಇಂದಿನಿಂದಲೇ (ಆಗಸ್ಟ್‌ 31) ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟಾಗಿದೆ. ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ.
ನೋಂದಣಿ ಶುಲ್ಕ ಶೇ.1 ರಿಂದ ಶೇ.2 ರಷ್ಟು ಏರಿಕೆ ಮಾಡಲಾಗಿದೆ. ಹೀಗಾಗಿ ಪ್ರತಿ 1 ಸಾವಿರ ರೂ.ಗೆ ನೋಂದಣಿ ಶುಲ್ಕವು 10 ರೂ. ಬದಲಿಗೆ 20 ರೂ. ಆಗಲಿದೆ. ಮಾರ್ಗಸೂಚಿ ದರದ ಪ್ರಮಾಣಕ್ಕೆ ಅನುಗುಣವಾಗಿ ನೋಂದಣಿ ಶುಲ್ಕ ನಿಗದಿಯಾಗಲಿದೆ.ಮಾರ್ಗಸೂಚಿ ದರದ ಪ್ರಮಾಣಕ್ಕೆ ಅನುಗುಣವಾಗಿ ನೋಂದಣಿ ಶುಲ್ಕ ನಿಗದಿ ಮಾಡಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹೇಳಿದೆ. ಸ್ಥಿರಾಸ್ತಿ ಶುದ್ಧ ಕ್ರಯ ಪತ್ರ, ಸ್ವಾಧೀನ ಭೋಗ್ಯ ಪತ್ರ, ಕ್ರಯ ಉದ್ದೇಶದ ಜಿಪಿಎ ಸೇರಿ ವಿವಿಧ ಆಸ್ತಿ ಖರೀದಿ ನೋಂದಣಿಗೆ ಈ ಶುಲ್ಕ ಅನ್ವಯವಾಗಲಿದೆ.

ರಾಜ್ಯದಲ್ಲಿ ಈವರೆಗೂ ನಿವೇಶನ, ಭೂಮಿ, ನಿವೇಶನ, ಮನೆ ಸೇರಿದಂತೆ ಸ್ಥಿರಾಸ್ತಿ ಖರೀದಿ ವೇಳೆ ಶೇ.1ರಷ್ಟು ನೋಂದಣಿ ಶುಲ್ಕ ಹಾಗೂ ಶೇ.5.6ರಷ್ಟು ಮುದ್ರಾಂಕ ಶುಲ್ಕ ಸೇರಿ ಶೇ.6.6ರಷ್ಟು ಶುಲ್ಕ ಇತ್ತು. ಆದರೆ ಈಗ ಏರಿಕೆಯಿಂದ ಒಟ್ಟು ಶೇ.7.6ರಷ್ಟು ಶುಲ್ಕ ಪಾವತಿಸಬೇಕಾಗುತ್ತದೆ.
ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ.7.5, ತೆಲಂಗಾಣ ರಾಜ್ಯಗಳು ಶೇ.7.5ರಷ್ಟು ಶುಲ್ಕ ಆಕರಿಸುತ್ತಿವೆ. ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಕೊಳ್ಳಲು, ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು ರಾಜ್ಯ ಸರ್ಕಾರವು 2025ರ ಆ.31ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇ.1 ರಿಂದ ಶೇ.2ರಷ್ಟು ಪರಿಷ್ಕರಿಸಿದೆ ಎಂದು ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕುಮಟಾ : ಶಾಲೆಯ ಪಕ್ಕವೇ ಭೂ ಕುಸಿತ ; ಕಟ್ಟಡಕ್ಕೆ ಬಂದು ಅಪ್ಪಳಿಸಿದ ಬೃಹತ್‌ ಬಂಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement