ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಸಮೀಪದ ನೇತ್ರಾಣಿ ದ್ವೀಪದ ಬಳಿಪರ್ಷಿಯನ್ ಬೋಟ್ ಮುಳುಗಡೆಯಾಗಿದ್ದು, ಅದೃಷ್ಟವಶಾತ್ ಬೋಟ್ನಲ್ಲಿದ್ದ 25 ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಈ ಬೋಟ್ ಮುಳುಗಡೆಯಾಗಿದೆ ಎನ್ನಲಾಗಿದೆ. ಬೋಟ್ ಮುಳುಗುತ್ತಿದ್ದ ವೇಳೆ ತಕ್ಷಣವೇ ಕರಾವಳಿ ಕಾವಲುಪಡೆಯ ಕಂಟ್ರೋಲ್ ರೂಮ್ಗೆ ಕರೆ ಮಾಡಲಾಯಿತು. ಅವರಿಂದ ಸಮೀಪದ ಮೀನುಗಾರಿಕಾ ಬೋಟ್ಗಳಿಗೆ ಮಾಹಿತಿ ರವಾನೆಯಾಯಿತು.
ಮಾಹಿತಿ ತಿಳಿದ ತಕ್ಷಣ ಸ್ಥಳೀಯವಾಗಿ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್ಗಳು ಘಟನಾ ಸ್ಥಳಕ್ಕೆ ಧಾವಿಸಿ, ಮುಳುಗುತ್ತಿದ್ದ ಬೋಟ್ನಲ್ಲಿದ್ದ ಎಲ್ಲ 25 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿವೆ. ಮಯೋಚಿತ ಸಹಾಯ ಮತ್ತು ರಕ್ಷಣಾ ಕಾರ್ಯದಿಂದಾಗಿ ದೊಡ್ಡ ದುರಂತ ತಪ್ಪಿದಂತಾಗಿದೆ. ಆದರೆ, ಈ ದುರಂತದಿಂದ ಅಂದಾಜು 80 ಲಕ್ಷ ರೂ.ಗಳಿಗೂ ಹೆಚ್ಚು ನಷ್ಟ ಸಂಭವಿಸಿದೆಯೆಂದು ಅಂದಾಜಿಸಲಾಗಿದೆ. ಕ್ಷಿಪ್ರ ಮಾಹಿತಿ ರವಾನೆ ಹಾಗೂ ರಕ್ಷಣಾ ಕಾರ್ಯದಿಂದಾಗಿ ದೊಡ್ಡ ದುರಂತವೊಂದು ತಪ್ಪಿದೆ.


ನಿಮ್ಮ ಕಾಮೆಂಟ್ ಬರೆಯಿರಿ