ಶಿರಸಿ: ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ವಿದ್ಯಾರ್ಥಿನಿಯ ಮೃತ ದೇಹ ಇಸಳೂರು ಕೆರೆಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ನೇಹಾ ಅವರ ತಂದೆ ಪೊಲೀಸ್ ಇಲಾಖೆಯ ಡಿಆರ್ನಲ್ಲಿ ಎಆರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮೀಣ ಠಾಣೆ ಪಿಎಸ್ಐ ಸಂತೋಷಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.


ನಿಮ್ಮ ಕಾಮೆಂಟ್ ಬರೆಯಿರಿ